ನಟ ಸುದೀಪ್​ಗೆ ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ: ಫೆ. 20ರಂದು ಪ್ರದಾನ

Sudeep
Published on

ಬೆಂಗಳೂರು: ನಟ ಸುದೀಪ್ ಇದೀಗ ಮತ್ತೊಂದು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ‘ದಬಂಗ್ 3’ ಚಿತ್ರದಲ್ಲಿ ಬಲ್ಲಿ ಸಿಂಗ್ ಪಾತ್ರದಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದರು. ಈ ಪಾತ್ರದ ಅತ್ಯುತ್ತಮ ಅಭಿನಯಕ್ಕೆ ನಟ ಸುದೀಪ್ ‘ದಾದಾ ಸಾಹೇಬ್ ಫಾಲ್ಕೆ ಇಂಟರ್​ನ್ಯಾಷನಲ್ ಫಿಲಮ್ ಫೆಸ್ಟಿವಲ್ ಅವಾರ್ಡ್-2020’ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದಾದಾ ಸಾಹೇಬ್ ಫಾಲ್ಕೆ ಮತ್ತು ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನದ ಹಿನ್ನೆಲೆಯಲ್ಲಿ ಫೆ.20ರಂದು ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲರು ಸೇರಿ ಭಾರತೀಯ ಚಿತ್ರರಂಗದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಇದು ಭಾರತ ಸರ್ಕಾರ ನೀಡುವ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ಅಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net