ಹೊಸ ಅವತಾರದಲ್ಲಿ ಅಖಿಲ್ ಅಕ್ಕಿನೇನಿ ... 'ಏಜೆಂಟ್​​​'ಗೆ ಸಾಥ್ ಕೊಟ್ಟ ಸುದೀಪ್

agent new
Published on

ಬೆಂಗಳೂರು: ಟಾಲಿವುಡ್​ ನಟ ಅಕ್ಕಿನೇನಿ ನಾಗಾರ್ಜುನ ಅವರ ಮಗ ಅಖಿಲ್​ ಚಿತ್ರರಂಗಕ್ಕೆ ಕಾಲಿಟ್ಟು ಕೆಲವು ವರ್ಷಗಳೇ ಆಗಿದ್ದರೂ, ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿರಲಿಲ್ಲ. ಈಗ ಅಖಿಲ್​ ಸಂಪೂರ್ಣ ಮೇಕ್​ಓವರ್​ ಮಾಡಿಕೊಂಡಿದ್ದಾರೆ. ಹೊಸ ಚಿತ್ರದ ಮೂಲಕ ಗ್ರಾಂಡ್​ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ.

ಅಂದಹಾಗೆ, ಅಖಿಲ್​ ಅಭಿನಯಿಸಿರುವ 'ಏಜೆಂಟ್​' ಚಿತ್ರವು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು, ಅದಕ್ಕೂ ಮುನ್ನ ಸುದೀಪ್ ಹಾಗೂ ತಮಿಳು ನಟ ಶಿವಕಾರ್ತಿಕೇಯನ್ ಟೀಸರ್ ಬಿಡುಗಡೆ ಮಾಡಿ ಅಖಿಲ್​ ಹಾಗೂ ಚಿತ್ರತಂಡಕ್ಕೆ ಸಾಥ್​ ನೀಡಿದ್ದಾರೆ.

ಈ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಅವತಾರದಲ್ಲಿ ಅಖಿಲ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ಮಲಯಾಳಂ ನಟ ಮಮ್ಮುಟ್ಟಿ ಅಭಿನಯ ನೋಡುಗರಿಗೆ ಥ್ರಿಲ್ ಕೊಡುತ್ತದೆ. ದೊಡ್ಡ ಬಜೆಟ್‌ನಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಅಖಿಲ್​ಗೆ ನಾಯಕಿಯಾಗಿ ಸಾಕ್ಷಿ ವೈದ್ಯ ನಟಿಸಿದ್ದಾರೆ. 'ಸೈರಾ ನರಸಿಂಹ ರೆಡ್ಡಿ' ಸಿನಿಮಾ ಖ್ಯಾತಿಯ ಸುರೇಂದ್ರ ರೆಡ್ಡಿ ಚಿತ್ರಕ್ಕೆ ಆಕ್ಷನ್-ಕಟ್ ಹೇಳಿದ್ದಾರೆ.

ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್ ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ. ಹಿಪ್​ಹಾಪ್ ತಮಿಳಾ ಸಂಗೀತ, ರಸೂಲ್ ಎಲ್ಲೂರು ಛಾಯಾಗ್ರಹಣ ಈ ಚಿತ್ರಕ್ಕಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆ ದಿನಾಂಕ ಹೊರಬೀಳಲಿದೆ.

'ಏಜೆಂಟ್​' ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು ಏಕಕಾಲಕ್ಕೆ ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net