'ಮದರಂಗಿ' ಕೃಷ್ಣ ಹುಟ್ಟುಹಬ್ಬಕ್ಕೆ 'ಶುಗರ್ ಫ್ಯಾಕ್ಟರಿ' ಟೀಸರ್ ...

Krishna - Sugar Factory - Final
Published on

ಬೆಂಗಳೂರು: 'ಡಾರ್ಲಿಂಗ್​' ಕೃಷ್ಣ' ಅಲಿಯಾಸ್​ 'ಮದರಂಗಿ' ಜೃಷ್ಣ, ಜೂನ್ 12ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹುಟ್ಟುಹಬ್ಬದ ಸಂದರ್ಭದಲ್ಲಿ 'ಶುಗರ್ ಫ್ಯಾಕ್ಟರಿ' ಚಿತ್ರವು ಹೊಸ ಟೀಸರ್​ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದೆ.

ಸಾಮಾನ್ಯವಾಗಿ, ಟೀಸರ್​ನಲ್ಲಿ ಪೋಸ್ಟರ್​ಗಳನ್ನು ಬಳಸಿಕೊಳ್ಳಲಾಗುತ್ತದೆ. ಆದರೆ, ಇಲ್ಲಿ ವಿಡಿಯೋ ತುಣುಕುಗಳನ್ನು ಬಳಸಿಕೊಂಡು ವಿಭಿನ್ನವಾಗಿ ಟೀಸರ್ ಮಾಡಲಾಗಿದೆಯಂತೆ. ಜೂನ್ 12ರಂದು ಆನಂದ್ ಆಡಿಯೋ ಯೂಟ್ಯೂಬ್‌ ಚಾನಲ್​ನಲ್ಲಿ ಈ ಟೀಸರ್ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ, ಜೂನ್ 11ರಂದು ಸಂಜೆ 5 ಗಂಟೆಗೆ ಇನ್ ಸ್ಟಾಗ್ರಾಂ ಮೂಲಕ ಲೈನ್​ನಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಹಾಗೂ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಲಿದ್ದಾರೆ.

ಈಗಾಗಲೇ 'ಶುಗರ್​ ಫ್ಯಾಕ್ಟರಿ' ಚಿತ್ರದ ಬಹತೇಕ ಚಿತ್ರೀಕರಣ ಬೆಂಗಳೂರು ಹಾಗೂ ಗೋವಾದಲ್ಲಿ ಮುಗಿದಿದೆ. ಲಾಕ್​ಡೌನ್ ಮುಗಿದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಬಾಕಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ದೀಪಕ್​ ಅರಸ್​ ತಿಳಿಸಿದ್ದಾರೆ.

ಕೃಷ್ಣಗೆ ಈ ಚಿತ್ರದಲ್ಲಿ ನಾಯಕಿಯರಾಗಿ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಮಿಕ್ಕಂತೆ ರಂಗಾಯಣ ರಘು, 'ಲವ್ ಮಾಕ್ಟೇಲ್' ಅಭಿ ಮುಂತಾದವರು ನಟಿಸುತ್ತಿದ್ದಾರೆ. ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಈ ಚಿತ್ರವನ್ನು ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net