ಗುರು ಶಿಷ್ಯರ ಜತೆಗೆ ಹೆಬ್ಳೀಕರ್; ಅಪ್ಪಟ ಗಾಂಧೀವಾದಿ ಆಗಿ ಅಭಿನಯ

Heblikar
Published on

ಬೆಂಗಳೂರು: ಶರಣ್ ಅಭಿನಯದ ‘ಗುರು ಶಿಷ್ಯರು’ ಚಿತ್ರತಂಡದಿಂದ ಸುದ್ದಿ ಬರದೇ ಬಹಳ ದಿನಗಳೇ ಆಗಿದ್ದವು. ಗಾಂಧಿ ಜಯಂತಿಯ ಅಂಗವಾಗಿ ಒಂದು ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಹಿರಿಯ ನಟ ಮತ್ತು ಪರಿಸರವಾದಿ ಸುರೇಶ್ ಹೆಬ್ಳೀಕರ್ ಗಾಂಧಿವಾದಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಗಾಂಧಿ ಅವರ ಬದುಕನ್ನೇ ಆದರ್ಶವಾಗಿ ತೆಗೆದುಕೊಂಡು ಬದುಕುವ ಪಾತ್ರ ಇದಾಗಿದ್ದು, ಹಳ್ಳಿಯೊಂದರಲ್ಲಿ ಶಾಲೆ ನಡೆಸುವ ಅಪ್ಪಟ ಗಾಂಧಿವಾದಿಯಾಗಿ ನಟಿಸುತ್ತಿದ್ದಾರೆ ಎಂದು ಮಾಹಿತಿ ಕೊಡುತ್ತಾರೆ ಚಿತ್ರದ ಕ್ರಿಯೇಟಿವ್ ಹೆಡ್ ಆಗಿರುವ ತರುಣ್ ಸುಧೀರ್. ಕೊನೆಯ ಹಂತದ ಚಿತ್ರೀಕರಣ ಸದ್ಯದಲ್ಲೇ ಬೆಂಗಳೂರಿನಲ್ಲಿ ನಡೆಯಲಿದೆ. ಶರಣ್ ಈ ಚಿತ್ರದಲ್ಲಿ ಪಿಟಿ ಮಾಸ್ಟರ್ ಆಗಿ ಕಾಣಿಸಿಕೊಂಡಿದ್ದು, ನಿಶ್ವಿಕಾ ನಾಯ್ಡು, ದತ್ತಣ್ಣ ಮುಂತಾದವರು ನಟಿಸಿದ್ದಾರೆ. ‘ಜಂಟಲ್​ವ್ಯಾನ್’ ನಿರ್ದೇಶಿಸಿದ್ದ ಜಡೇಶ್ ಹಂಪಿ ಈ ಚಿತ್ರದ ನಿರ್ದೇಶಕರು. ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಸುಧಾಕರ್ ಶೆಟ್ಟಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net