ಚಂದನವನಕ್ಕೆ ದಿ ಗ್ರೇಟ್ ಖಲಿ ಎಂಟ್ರಿ; ‘ಕೆಂಡದ ಸೆರಗು’ ಚಿತ್ರದಲ್ಲಿ WWE ವರ್ಲ್ಡ್ ಚಾಂಪಿಯನ್ …

The Great Khali 1
Published on

ಬೆಂಗಳೂರು: ಭೂಮಿ ಶೆಟ್ಟಿ ಮತ್ತು ಮಾಲಾಶ್ರೀ, 'ಕೆಂಡದ ಸೆರಗು' ಎಂಬ ಚಿತ್ರದಲ್ಲಿ ಜತೆಯಾಗಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ಈಗ ಈ ಚಿತ್ರಕ್ಕೆ WWE ವರ್ಲ್ಡ್ ಚಾಂಪಿಯನ್ ದಿ ಗ್ರೇಟ್​ ಖಾಲಿ ಸಹ ಸೇರ್ಪಡೆಯಾಗಿದ್ದಾರೆ.

ರಾಕಿ ಸೋಮ್ಲಿ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ‘ಕೆಂಡದ ಸೆರಗು’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ವರ್ಲ್ಡ್ ಚಾಂಪಿಯನ್ ಕುಸ್ತಿ ಪಟು ದಿ ಗ್ರೇಟ್ ಖಲಿ ಎಂಟ್ರಿ ಕೊಟ್ಟಿದ್ದಾರೆ. ನಿರ್ದೇಶಕ ರಾಕಿ ಸೋಮ್ಲಿ ಅವರು ದಿ ಗ್ರೇಟ್ ಖಲಿಯನ್ನು ಭೇಟಿ ಮಾಡಿ ಸಿನಿಮಾ ಕಥೆ ಹಾಗೂ ಅವರ ಪಾತ್ರದ ಬಗ್ಗೆ ವಿವರಿಸಿದ್ದಾರೆ. ಸಿನಿಮಾ ಬಗ್ಗೆ ಕೇಳಿ ಥ್ರಿಲ್ ಆಗಿರುವ ಖಲಿ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಖಲಿ ಜೊತೆಗಿನ ಫೋಟೋ ಶೇರ್ ಮಾಡಿಕೊಂಡಿರುವ ರಾಕಿ ಸೋಮ್ಲಿ ಚಿತ್ರತಂಡಕ್ಕೆ ಖಲಿ ಎಂಟ್ರಿ ನೀಡುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಖಲಿ ಚಿತ್ರತಂಡ ಸೇರಿಕೊಳ್ಳಲಿದ್ದು, ಚಿತ್ರೀಕರಣ ಆರಂಭವಾಗಲಿದೆ.

ರಾಕಿ ಸೋಮ್ಲಿ ಅವರೇ ಬರೆದ ‘ಕೆಂಡದ ಸೆರಗು’ ಎಂಬ ಕಾದಂಬರಿಯನ್ನು ಈ ಸಿನಿಮಾ ಆಧರಿಸಿದಿದೆ. . ಮಹಿಳಾ ಪ್ರಧಾನ ಕಥಾಹಂದರ ಒಳಗೊಂಡ ಈ ಚಿತ್ರ ಕುಸ್ತಿ ಪಟು ಕಥೆ ಹೇಳಲಿದೆ. ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣಹಚ್ಚಿದ್ದಾರೆ.

ಶ್ರೀ ಮುತ್ತು ಟಾಕೀಸ್ ಮತ್ತು ಎಸ್ ಕೆ ಪ್ರೊಡಕ್ಷನ್ಸ್ ಬ್ಯಾನರ್​ನಡಿ ಕೆ.ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ, ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ವಿಪಿನ್ ವಿ ರಾಜ್ ಛಾಯಾಗ್ರಹಣ ಮತ್ತು ವೀರೇಶ್ ಕಂಬ್ಲಿ ಸಂಗೀತವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net