ಲೈಂಗಿಕ ಬಯಕೆ ಈಡೇರಿಸಲು ಕರೆದವರಿಗೆ… ಸರ್ಕಾರದ ಮುಂದೆ ವಿಶೇಷ ಬೇಡಿಕೆ ಇಟ್ಟ ನಟಿ ಹನಿ ರೋಸ್​

Honey Rose
Published on

ತಿರುವನಂತಪುರಂ: ಸಾಮಾಜಿಕ ಜಾಲತಾಣದಲ್ಲಿ ಸದಾ ಬಿಜಿಯಾಗಿರುವವರಿಗೆ ಮಲಯಾಳಂ ಬ್ಯೂಟಿ ಹನಿ ರೋಸ್​ ಬಗ್ಗೆ ಹೆಚ್ಚೇನು ಹೇಳಬೇಕಿಲ್ಲ. ಏಕೆಂದರೆ, ಹನಿ ರೋಸ್​ ಅವರು ಸಿನಿಮಾಗಳಿಗಿಂತ ಜಾಲತಾಣದಲ್ಲೇ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಅವರ ಮೈಮಾಟಕ್ಕೆ ಅನೇಕ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. ಅವರ ಸೌಂದರ್ಯಕ್ಕೆ ಮಾರು ಹೋಗಿ ಹೆಚ್ಚಿನ ಸಂಖ್ಯೆಯಲ್ಲಿ ಅವರನ್ನು ಫಾಲೋ ಮಾಡುತ್ತಿದ್ದಾರೆ. ಸದ್ಯಕ್ಕೆ ಕೆಲ ತಮಿಳು ಮತ್ತು ತೆಲುಗು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಹನಿ ರೋಸ್​ ಬಿಜಿಯಾಗಿದ್ದಾರೆ.

ತಾಜಾ ಸಂಗತಿ ಏನೆಂದರೆ, ಹನಿ ರೋಸ್​ ಅವರು ಹೇಮಾ ಸಮಿತಿ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕೊಚ್ಚಿಯಲ್ಲಿ ಓಣಂ ನಿಮಿತ್ತ ಆಯೋಜಿಸಲಾದ ವಸ್ತು ಪ್ರದರ್ಶನ ಮತ್ತು ಮಾರುಕಟ್ಟೆ ಮೇಳವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹನಿ ರೋಸ್​, ಸಿನಿಮಾ ರಂಗದಲ್ಲಿ ಯಾರೆಲ್ಲ ಲೈಂಗಿಕ ಶೋಷಣೆ ಮಾಡಿದ್ದಾರೋ ಅವರಿಗೆಲ್ಲ ಕಾನೂನು ಪ್ರಕಾರ ಕಠಿಣ ಶಿಕ್ಷೆ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಅಂದಹಾಗೆ ನ್ಯಾಯಮೂರ್ತಿ ಹೇಮಾ ಸಮಿತಿ ನೀಡಿರುವ ವರದಿ, ಕೇರಳ ಚಿತ್ರರಂಗದಲ್ಲಿ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲೇ ಭಾರಿ ಸಂಚಲನ ಮೂಡಿಸಿದೆ. ಈ ವರದಿಯ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ ಸ್ಟಾರ್ ನಟಿಯರು ಕೂಡ ಚಿತ್ರರಂಗದಲ್ಲಿ ತಾವು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡುತ್ತಿದ್ದಾರೆ.

ಏನಿದು ಹೇಮಾ ಸಮಿತಿ ವರದಿ?

ಮಲಯಾಳಂ ಚಿತ್ರರಂಗದ ಖ್ಯಾತ ನಟಿಯ ಮೇಲೆ 2017ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ರಾಷ್ಟ್ರವ್ಯಾಪಿ ಭಾರಿ ಆಕ್ರೋಶಕ್ಕೆ ಕಾರಣವಾಯಿತು. ಇಂದಿಗೂ ಈ ಪ್ರಕರಣದ ವಿಚಾರಣೆ ನಡೆಯುತ್ತಲೇ ಇದೆ. ಈ ಪ್ರಕರಣ ಬೆನ್ನಲ್ಲೇ ನ್ಯಾಯಾಮೂರ್ತಿ ಕೆ. ಹೇಮಾ (ನಿವೃತ್ತ) ಅವರ ನೇತೃತ್ವದಲ್ಲಿ ಮಾಜಿ ಅಧಿಕಾರಿ ಕೆಬಿ ವಲ್ಸಲಕುಮಾರಿ ಮತ್ತು ಹಿರಿಯ ನಟಿ ಶಾರದಾ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಕೇರಳ ಸರ್ಕಾರ ರಚನೆ ಮಾಡಿತ್ತು. ಈ ಸಮಿತಿ 2019ರ ಡಿಸೆಂಬರ್​ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ನಾಲ್ಕೂವರೆ ವರ್ಷಗಳ ಬಳಿಕ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿದ್ದು, ಮಲಯಾಳಂ ಚಿತ್ರರಂಗದ ಕರಾಳ ಮುಖ ಅನಾವರಣವಾಗಿದೆ. ಮಲಯಾಳಂ ಸಿನಿರಂಗದ ಒಂದೊಂದೆ ಕರಾಳ ಮುಖವಾಡ ಕಳಚಿ ಬೀಳುತ್ತಿದೆ. ಸಿನಿಮಾದಲ್ಲಿ ಮಾತ್ರವಲ್ಲದೆ ಎಲ್ಲ ಕ್ಷೇತ್ರಗಳಲ್ಲೂ ಲೈಂಗಿಕ ಶೋಷಣೆ ನಡೆಯುತ್ತಿದೆ. ಆದರೆ, ಸಿನಿಮಾರಂಗದಲ್ಲಿ ವ್ಯಾಪಕವಾಗಿದೆ ಎನ್ನುತ್ತಾರೆ ನೊಂದ ಮಹಿಳೆಯರು. ಸಿನಿಮಾದಲ್ಲಿ ಅವಕಾಶ ಬೇಕಾದರೆ ಕಾಮತೃಷೆ ತೀರಿಸಬೇಕು ಎನ್ನುತ್ತಾರೆ ನೊಂದ ಕಲಾವಿದೆಯರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net