ಹೈದರಾಬಾದ್: ಟಾಲಿವುಡ್ನ ಜನಪ್ರಿಯ ನಟಿ ಮತ್ತು ನಿರೂಪಕಿ ಅನಸೂಯಾ ಭಾರದ್ವಾಜ್ ( Anasuya Bharadwaj ) ಬಗ್ಗೆ ಬಹುತೇಕರಿಗೆ ತಿಳಿದೇ ಇರುತ್ತದೆ. ನ್ಯೂಸ್ ರೀಡರ್ ಆಗಿ ವೃತ್ತಿ ಜೀವನ ಆರಂಭಿಸಿದ ಅನಸೂಯಾ ನಂತರ ಆ್ಯಂಕರ್ ಆಗಿ, ನಾಯಕಿಯಾಗಿ, ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಹಲವು ವಿಭಿನ್ನ ಪಾತ್ರಗಳಲ್ಲಿ ಪ್ರೇಕ್ಷಕರನ್ನು ರಂಜಿಸುವ ಮೂಲಕ ಸೆಲೆಬ್ರಿಟಿಯಾದರು. ಅದರಲ್ಲೂ ತಮ್ಮ ಸೌಂದರ್ಯ ಮತ್ತು ಅಭಿನಯದಿಂದಲೇ ಎಲ್ಲರನ್ನು ತಮ್ಮತ್ತ ಸೆಳೆದಿದ್ದಾರೆ. ಆದರೆ, ಅನಸೂಯಾ ಅವರಿಗೆ ವಿವಾದಗಳು ಹೊರತಲ್ಲ. ಅದರಲ್ಲೂ ತನ್ನ ಹಾಟ್ ಡ್ರೆಸ್‌ಗಳಿಂದಲೇ ಆಗಾಗ ಟ್ರೋಲ್‌ಗೆ ಒಳಗಾಗುತ್ತಕೇ ಇರುತ್ತಾರೆ. ಆದರೆ, ಇದ್ಯಾವುದಕ್ಕೂ ಅವರು ಕ್ಯಾರೆ ಎನ್ನುವುದಿಲ್ಲ.