Casting Couch : ಈಗಾಗಲೇ ಸಾಕಷ್ಟು ನಟಿಯರು ಸಿನಿಮಾ ಇಂಡಸ್ಟ್ರಿಯಲ್ಲಿ ನಡೆಯುವ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ನಿರ್ದೇಶಕರು, ನಟರು ಹಾಗೂ ನಿರ್ಮಾಪಕರು ಅವಕಾಶದ ಹೆಸರಿನಲ್ಲಿ ತಮ್ಮ ಬಯಕೆಗಳನ್ನು ಈಡೇರಿಸುವಂತೆ ನಟಿಯರನ್ನು ಕೇಳುವುದು ಸಿನಿ ಇಂಡಸ್ಟ್ರಿಗೆ ಅಂಟಿಕೊಂಡಿರುವ ಶಾಪವಾಗಿದೆ. ಬಾಲಿವುಡ್, ಟಾಲಿವುಡ್, ಕಾಲಿವುಡ್, ಸ್ಯಾಂಡಲ್ವುಡ್ ಮತ್ತು ಮಾಲಿವುಡ್ನಲ್ಲಿ ನಡೆಯುವ ಕಾಸ್ಟಿಂಗ್ ಕೌಚ್ಗೆ ಅನೇಕ ಕಲಾವಿದೆಯರು ಸಂತ್ರಸ್ತೆಯರಾಗಿದ್ದಾರೆ. ಇನ್ನು ಕೆಲವರು ಅದನ್ನು ಎದುರಿಸಿದ್ದಾರೆ. ಸಾಕಷ್ಟು ನಟಿಯರು ಕಾಸ್ಟಿಂಗ್ ಕೌಚ್ ವಿಚಾರವಾಗಿ ಧೈರ್ಯವಾಗಿ ಮಾತನಾಡಿದ್ದಾರೆ. ಇದೀಗ ಆ ಸಾಲಿಗೆ ಟಾಲಿವುಡ್ನ ಖ್ಯಾತ ನಟಿ ಸತ್ಯ ಕೃಷ್ಣನ್ ಸೇರಿಕೊಂಡಿದ್ದಾರೆ.