18 ಸಂಘಗಳಿಗೆ ನಾಲ್ಕೂವರೆ ಲಕ್ಷ ಕೊಟ್ಟ ಉಪೇಂದ್ರ

Upendra Final
Published on

ಕನ್ನಡ ಚಲನಚಿತ್ರ ಕಾರ್ಮಿಕರ ಮತ್ತು ತಂತ್ರಜ್ಞರ ಒಕ್ಕೂಟದ 18 ಸಂಘಗಳಿಗೆ, ‘ರಿಯಲ್ ಸ್ಟಾರ್’ ಉಪೇಂದ್ರ ಅವರು ತಲಾ 25 ಸಾವಿರ ರೂಪಾಯಿಗಳಂತೆ ನಾಲ್ಕೂವರೆ ಲಕ್ಷ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಸೋಮವಾರ ಸಂಜೆ ಉಪೇಂದ್ರ ಅವರು ಕರ್ನಾಟಕ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷ ಮತ್ತು ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು ಅವರಿಗೆ ಚೆಕ್ ಹಸ್ತಾಂತರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಉಪೇಂದ್ರ, ‘ಕನ್ನಡ ಚಲನಚಿತ್ರ ಕಾರ್ಮಿಕ ಸಂಘಗಳ ಒಕ್ಕೂಟದ 18 ಸಂಘಗಳಿಗೆ ತಲಾ 25 ಸಾವಿರದಂತೆ 4,50,000 ರೂಪಾಯಿಗಳನ್ನು ನೀಡುತ್ತಿದ್ದೇನೆ. ಆದಷ್ಟು ಬೇಗ ಈ ಕರೊನಾ ಸಮಸ್ಯೆಯಿಂದ ಎಲ್ಲರೂ ಹೊರಬರುವಂತಾಗಲೀ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ, ನಿಮ್ಮ ಜೊತೆ ಎಂದೆಂದೂ ನಾನಿರುತ್ತೇನೆ’ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಕನ್ನಡ ಚಲನಚಿತ್ರ ಕಾರ್ಮಿಕರ ಮತ್ತು ತಂತ್ರಜ್ಞರ ಒಕ್ಕೂಟದ 18 ಸಂಘಗಳಿಗೆ ನಿಖಿಲ್ ಕುಮಾರಸ್ವಾಮಿ 32 ಲಕ್ಷ ದೇಣಿಗೆ ಕೊಟ್ಟಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net