ಇನ್ನು, ಈ ಚಿತ್ರದ ನಾಯಕಿಯಾಗಿರುವ ನಟಿ ವೇದಿಕಾ, '‘ಬಹಳ ದಿನಗಳ ನಂತರ ನಿಮ್ಮ ಮುಂದೆ ಬರುತ್ತಿದ್ದೇನೆ. ಈ ಸಿನಿಮಾದಲ್ಲಿ ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆ ನಟಿಸಿದ್ದು ಖುಷಿ ತಂದಿದೆ. ಇಡೀ ಚಿತ್ರತಂಡದ ಪರಿಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ. ನಾನು ಜರ್ನಲಿಸ್ಟ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ'', ಎಂಬ ಮಾಹಿತಿ ನೀಡಿದ್ದಾರೆ. ಅಂದಹಾಗೆ, ರಾಜ್ಯದಾದ್ಯಂತ ಸುಮಾರು 350ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಉಪೇಂದ್ರ ಅವರ ‘ಹೋಮ್ ಮಿನಿಸ್ಟರ್’ ರಿಲೀಸ್ ಆಗಲಿದೆ. ಸುಜಯ್ ಕೆ. ಶ್ರೀಹರಿ ನಿರ್ದೇಶನದ ಈ ಚಿತ್ರಕ್ಕೆ ಜಿಬ್ರಾನ್ ಸಂಗೀತ ನೀಡಿದ್ದು, ಕುಂಟುನಿ ಎಸ್ ಕುಮಾರ್ ಅವರ ಛಾಯಾಗ್ರಹಣ ಹಾಗೂ ಅಂಟೋನಿ ಅವರ ಸಂಕಲನ ಇದೆ. ಚಿತ್ರದಲ್ಲಿ ನಟಿ ವೇದಿಕಾ, ಸುಮನ್ ರಂಗನಾಥ್, ತಾನ್ಯ ಹೋಪ್, ಸಾಧುಕೋಕಿಲ, ಅವಿನಾಶ್, ಮಾಳವಿಕಾ ಅವಿನಾಶ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.