ಕಲಾವಿದರ ಸಂಘ ಆಯ್ತು; ಇದೀಗ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಲಸಿಕೆ ಅಭಿಯಾನ

KFCC - Final
Published on

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಛೇರಿಯಲ್ಲಿ ಇಂದು ಚಿತ್ರೋದ್ಯಮದ ಕಲಾವಿದರು, ಕಾರ್ಮಿಕರಿಗೆ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಲಾವಿದರು ಮತ್ತು ತಂತ್ರಜ್ಞರು ಸೇರಿದಂತೆ ಕನ್ನಡ ಚಿತ್ರರಂಗದ 20,000 ಜನರಿಗೆ ಈ ಕಾರ್ಯಕ್ರಮದ ಮೂಲಕ ಲಸಿಕೆ ಸಿಗಲಿದೆ.

ಕನ್ನಡ ಚಿತ್ರರಂಗದ ಕಲಾವಿದರು ಮತ್ತು ತಂತ್ರಜ್ಞರಿಗೆ ಉಚಿತವಾಗಿ ಲಸಿಕೆ ವಿತರಿಸಬೇಕು ಎಂದು ಕನ್ನಡ ಚಿತ್ರರಂಗದ ಹಲವು ಗಣ್ಯರು ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಅದಕ್ಕೆ ಸರಿಯಾಗಿ ಕೆಲವು ದಿನಗಳ ಹಿಂದೆ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಎರಡು ದಿನಗಳ ಲಸಿಕೆ ಕೋವಿಶಿಲ್ಡ್ ಲಸಿಕೆ ಅಭಿಯಾನವನ್ನು ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಚಿತ್ರರಂಗದ ಹಲವು ಕಲಾವಿದರು ಮತ್ತು ತಂತ್ರಜ್ಞರು ಲಸಿಕೆ ಹಾಕಿಸಿಕೊಂಡಿದ್ದಾರೆ.

ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೂ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭವಾಗಿದ್ದು, ಆರೋಗ್ಯ ಸಚಿವ ಕೆ. ಸುಧಾಕರ್​ ಉದ್ಘಾಟನೆ ಮಾಡಿದ್ದಾರೆ. ವಾರ್ತಾ ಸಚಿವ ಸಿ.ಸಿ. ಪಾಟೀಲ್​, ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಗೌರವ್​ ಗುಪ್ತಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್​, ರೂಪಾ ಅಯ್ಯರ್, ನಟಿ ತಾರಾ​ ಸೇರಿದಂತೆ ಹಲವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net