ಲವ್​ಲೀ ವಂಶಿಕಾ; ಕಿರುತೆರೆಯಿಂದ ಬೆಳ್ಳಿತೆರೆಗೆ

Vanshika
Published on

ಬೆಂಗಳೂರು: ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿರುವ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಅಂಜನಿ ಕಶ್ಯಪ್ ಇದೀಗ ಹಿರಿತೆರೆಗೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾಳೆ. ತನ್ನ ಪಟಪಟ ಮಾತುಗಳಿಂದ ಮತ್ತು ನಟನೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿರುವ ವಂಶಿಕಾ, ಇದೀಗ ವಸಿಷ್ಠ ಸಿಂಹ ಅಭಿನಯದ ‘ಲವ್ ಲೀ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾಳೆ.

ಈ ಕುರಿತು ‘ವಿಜಯವಾಣಿ’ ಜತೆಗೆ ಮಾತನಾಡಿದ ಚಿತ್ರದ ನಿರ್ದೇಶಕ ಚೇತನ್ ಕೇಶವ್, ‘ನಮ್ಮ ಚಿತ್ರದಲ್ಲಿ ನಾಲ್ಕೈದು ವರ್ಷದ ಬಾಲಕಿಯ ಪಾತ್ರವಿದೆ. ಬಹಳ ಚುರುಕಾದ ಪಾತ್ರ ಅದು. ಆ ಪಾತ್ರಕ್ಕೆ ವಂಶಿಕಾ ಸೂಕ್ತ ಎಂದನಿಸಿತು. ಆಕೆ ಸಹ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾಳೆ. ಸೆ. 06ರಿಂದ ಆಕೆಯ ಭಾಗದ ಚಿತ್ರೀಕರಣ ಶುರುವಾಗಲಿದೆ’ ಎನ್ನುತ್ತಾರೆ.

ಕೆಲವು ತಿಂಗಳುಗಳ ಹಿಂದೆ ಪ್ರಾರಂಭವಾದ ‘ಲವ್ ಲೀ’ ಚಿತ್ರದ ಚಿತ್ರೀಕರಣ ಈಗ ಅರ್ಧದಷ್ಟು ಮುಗಿದಿದೆ. ಬೆಂಗಳೂರಲ್ಲದೆ, ಮಂಗಳೂರಿನಲ್ಲೂ ಬಾಕಿ ಭಾಗದ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ವಸಿಷ್ಠಗೆ ನಾಯಕಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ಇದ್ದಾರೆ. ಈ ಚಿತ್ರವನ್ನು ರವೀಂದ್ರ ಕುಮಾರ್ ನಿರ್ವಿುಸುತ್ತಿದ್ದು, ಅನೂಪ್ ಸೀಳಿನ್ ಸಂಗೀತ ಚಿತ್ರಕ್ಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net