

ಮುಂಬೈ: ಸದ್ಯ ಈಗ ಎಲ್ಲೆಲ್ಲೂ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸದ್ದು ಜೋರಾಗಿದೆ. ಕೆಜಿಎಫ್ ಚಾಪ್ಟರ್ 2 ಯಶಸ್ಸಿನ ನಂತರ ಮತ್ತೊಂದು ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ' ವಿಕ್ರಾಂತ್ ರೋಣ' ಬಿಡುಗಡೆಗೆ ಸಜ್ಜಾಗಿದೆ. ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅಭಿಯನದ ಈ ಚಿತ್ರದ ರಾ ರಾ ರುಕ್ಕಮ್ಮ ಸಾಂಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ವಿಕ್ರಾಂತ್ ರೋಣ ಚಿತ್ರದ ಟ್ರೇಲರ್ ಅನ್ನು ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಶೇರ್ ಮಾಡಿಕೊಂಡಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಬಾಲಿವುಡ್ ಸೇರಿದಂತೆ ಕೆಜಿಎಫ್ ನಂತರ ಭಾರತೀಯ ಚಿತ್ರರಂಗದಲ್ಲಿ ಮತ್ತೊಂದು ಕನ್ನಡ ಸಿನಿಮಾ ಹೊಸ ದಾಖಲೆ ಬರೆಯುವ ಸಾಧ್ಯತೆಯಿದೆ. ಮುಂದಿನ ತಿಂಗಳು 28ರಂದು ಚಿತ್ರ ಬಿಡುಗಡೆಯಾಗಲಿದೆ.'
ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸುದೀಪ್, ತಮ್ಮ ಚಿತ್ರದ ಟ್ರೇಲರ್ ಶೇರ್ ಮಾಡಿದ್ದಕ್ಕೆ ಅಮಿತಾಬ್ ಬಚ್ಚನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.ರಾರಾ.. ರುಕ್ಕಮ್ಮ ಸಾಂಗ್ ಅಂತೂ ಹೊಸ ಟ್ರೆಂಡ್ ಸೃಷ್ಟಿಸಿದೆ. ಕಿರುತೆರೆಯ ಬಹುತೇಕ ಕಲಾವಿದರು ಈ ಹಾಡಿಗೆ ಹೆಜ್ಜೆಗೆ ಹಾಕುವ ಮೂಲಕ ಇನ್ಸ್ಟಾಗ್ರಾಮ್ ರೀಲ್ಸ್ ನಲ್ಲಿ ಸಾಕಷ್ಟು ಮೋಡಿ ಮಾಡುತ್ತಿದ್ದಾರೆ. (ಏಜೆನ್ಸೀಸ್)