ಸೆ.15ಕ್ಕೆ ಆನ್ಲೈನ್​ ಮೂಲಕ ಡಾ. ವಿಷ್ಣುವರ್ಧನ್​ ಸ್ಮಾರಕದ ಭೂಮಿಪೂಜೆ

Chief Minister - Vishnuvardhan - Final
Published on

ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು, ಸೆ.15ರಂದು ಆನ್ಲೈನ್​ ಮೂಲಕ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ.

ಬುಧವಾರ ಬೆಳಿಗ್ಗೆ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ನಟ ಅನಿರುದ್ಧ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ‌ ಮಾಡಿ, ಇದೇ ತಿಂಗಳು 15ರಂದು ನಡೆಯಲಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಸಲ್ಲಿಸಿದ್ದಾರೆ.

ಈ ಕಾರ್ಯಕ್ರಮವು ಬಹಳ ಸರಳವಾಗಿ ನಡೆಯಲಿದ್ದು, ವಿಷ್ಣು ಅವ ಅಭಿಮಾನಿಗಳು ತಮ್ಮ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬರಬಾರದು ಮತ್ತು ಗುಂಪುಗೂಡಬಾರದು ಎಂದು ಹೇಳಿದ್ದಾರೆ.

ಇನ್ನು, ಇದುವರೆಗೂ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದ ಭೂವಿವಾದಗಳೆಲ್ಲಾ ಬಗೆಹರಿದಿದೆ ಎಂದು ಅವರು ಹೇಳಿದ್ದಾರೆ. ಜನರ ಪ್ರೀತಿ ಮತ್ತು ಅಭಿಮಾನದಿಂದ ಸ್ಮಾರಕ ನಿರ್ಮಾಣಕ್ಕೆ ಚಾಲನೆ ಸಿಗುತ್ತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net