2024 ರ ಏಪ್ರಿಲ್ 14 ರಂದು ಮುಂಜಾನೆ ಬಾಂದ್ರಾ ಮೂಲದ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಬೈಕ್‌ನಲ್ಲಿ ಬಂದಿದ್ದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಎಂಬುವವರು ಗುಂಡಿನ ದಾಳಿ ನಡೆಸಿದ್ದರು. ಪ್ರಸ್ತುತ ಚೌಧರಿ, ಗುಪ್ತಾ, ಪಾಲ್, ಸೋನುಕುಮಾರ್ ಬಿಷ್ಣೋಯ್, ಮೊಹಮ್ಮದ್ ರಫೀಕ್ ಚೌಧರಿ ಮತ್ತು ಹರ್ಪಾಲ್ ಸಿಂಗ್ ಎಂಬುವವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಮತ್ತೊಬ್ಬ ಆರೋಪಿ ಅನುಜ್‌ಕುಮಾರ್ ಥಾಪನ್ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಕೂಡ ಬೇಕಾಗಿರುವ ಪ್ರಮುಖ ಆರೋಪಿಯಾಗಿದ್ದಾನೆ, (ಏಜೆನ್ಸೀಸ್).