Yami Gautam: ಉರಿ: ದಿ ಸರ್ಜಿಕಲ್ ಸ್ಟ್ರೈಕ್, ಆರ್ಟಿಕಲ್ 370 ಹಾಗೂ ಧುರಂಧರ್ ಸಿನಿಮಾ ಮೂಲಕ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ನಟಿ ಎಂದರೆ ಅದು ಯಾಮಿ ಗೌತಮ್ ಆಗಿದ್ದಾರೆ. ಆರ್ಟಿಕಲ್ 370 ಯಲ್ಲಿನ ನಟನೆಗೆ ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಯಾಮಿ, ನಿರ್ದೇಶಕ ಆದಿತ್ಯ ಧರ್ ಅವರ ಧರ್ಮಪತ್ನಿಯಾಗಿದ್ದಾರೆ. ಇತ್ತೀಚೆಗೆ ನಟಿ, ಅಯೋಧ್ಯೆಯಲ್ಲಿರುವ ಪ್ರಭು ಶ್ರೀರಾಮನ ದರ್ಶನ ಪಡೆದಿದ್ದು, ಅಲ್ಲಿಯ ಕೆಲ ಫೋಟೊಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.