More

  ಪೌರತ್ವ ತಿದ್ದುಪಡಿ ಕಾಯ್ದೆ ರದ್ದು ಮಾಡಲಿ; ಜಿಲ್ಲಾ ವಕೀಲರ ಸಂಘ ಒತ್ತಾಯ

  ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ ರದ್ದು ಪಡಿಸಲು ಒತ್ತಾಯಿಸಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ವಿರೋಧಿ ಜಿಲ್ಲಾ ನ್ಯಾಯವಾದಿಗಳ ಸಂಘ ಪ್ರತಿಭಟನೆ ನಡೆಸಿತು.

  ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಜಮಾಯಿಸಿದ ಜಿಲ್ಲೆಯ ವಿವಿಧ ತಾಲೂಕಿನ ಕೆಲ ವಕೀಲರು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಿ, ಜನರ ಕಲ್ಯಾಣಕ್ಕಾಗಿ ಯೋಜನೆ ರೂಪಿಸುವುದೇ ಕೇಂದ್ರ ಸರ್ಕಾರ ಧರ್ಮದ ಆಧಾರದಲ್ಲಿ ಒಡೆದಾಳುವ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

  ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಮಾರೆಪ್ಪ, ಉಪಾಧ್ಯಕ್ಷ ಆರ್.ಗೌಸ್ ಪಾಷಾ, ಕರುಣಾಕರ್ ಕಟ್ಟಿಮನಿ, ಪ್ರ.ಕಾ. ಎನ್. ವಾಹೀದ್ ಪಟೇಲ್, ಜಂಟಿ ಕಾರ್ಯದರ್ಶಿ ಎ.ಎಂ. ಅಲಿಖಾನ್, ಮೊಹ್ಮದ್ ಅಬ್ದುಲ್ ವಾಜೀದ್, ಸಲಹಾ ಸಮಿತಿಯ ಸದಸ್ಯರಾದ ಎಂ.ಡಿ.ಕಲೀಮ್, ಚಾಂದ್ ಅಬ್ದುಲ್ ರಬ್,ಅಬ್ದುಲ್ ಆಹ್ಮದ್ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts