ನವದೆಹಲಿ: ಐತಿಹಾಸಿಕ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ನಡೆದ ಎನ್ಸಿಸಿ ರ‍್ಯಾಲಿಯಲ್ಲಿ ಅವರು ಮಾತನಾಡಿದರು.
ನೆರೆ ರಾಷ್ಟ್ರಗಳಿಂದ ದೌರ್ಜನ್ಯಕ್ಕೆ ಒಳಗಾಗುವ ಅಲ್ಪ ಸಂಖ್ಯಾತರನ್ನು ಕಾಯ್ದೆ ರಕ್ಷಣೆ ಮಾಡುತ್ತದೆ. ನಾವು ಚುನಾವಣೆಗೂ ಮೊದಲು ನೀಡಿದ್ದ ಭರವಸೆಯನ್ನು ಈಡೇರಿಸಲು ಕಾಯ್ದೆ ಜಾರಿಗೆ ತರಲಾಗಿದೆ. ಕಾಯ್ದೆಯಿಂದ ರಕ್ಷಣೆ ದೊರೆಯುತ್ತದೆಯೇ ಹೊರತು ಯಾರ ಪೌರತ್ವವನ್ನು ಕಸಿಯುವುದಿಲ್ಲ ಎಂದು ಅವರು ಹೇಳಿದರು. (ಏಜೆನ್ಸೀಸ್)