More

    ವೀಕ್ಷಕರೊಂದಿಗೆ ನಗರ ಜಿಲ್ಲಾ ಚುನಾವಣಾಧಿಕಾರಿಗಳ ಸಂವಾದ

    ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಯೋಗದಿಂದ ನೇಮಿಸಲ್ಪಟ್ಟ ಸಾಮಾನ್ಯ ವೀಕ್ಷಕರೊಂದಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಗುರುವಾರ ಸಂವಾದ ನಡೆಸಿದರು.

    ಲೋಕಸಭಾ ಚುನಾವಣೆಯ ಸಂಬಂಧ ಆಡಳಿತಾತ್ಮಕ ಪ್ರಕ್ರಿಯೆ ಕುರಿತು ನೇಮಿಸಲ್ಪಟ್ಟ ಸಾಮಾನ್ಯ ವೀಕ್ಷಕರು, ಚುನಾವಣಾಧಿಕಾರಿಗಳು ಹಾಗೂ ಇತರ ನೋಡಲ್ ಅಧಿಕಾರಿಗಳೊಂದಿಗೆ ಕುಮಾರಕೃಪಾ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಸಾಮಾನ್ಯ ವೀಕ್ಷಕರಿಗೆ ಲೋಕಸಭಾ ಚುನಾವಣಾ ನಿರ್ವಹಣಾ ಯೋಜನೆಯ ಸಂಪೂರ್ಣ ವರದಿಯ ಪುಸ್ತಕವನ್ನು ನೀಡಲಾಗಿದೆ. ಈ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸುವ ಜತೆಗೆ ಚುನಾವಣಾ ಕಾರ್ಯಕ್ಕೆ ಸಿಬ್ಬಂದಿಗಳ ನಿಯೋಜನೆ ವೇಳೆ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

    ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್ ಚಟುವಟಿಕೆಗಳನ್ನು ನಡೆಸಿ ನಾಗರಿಕರಲ್ಲಿ ಮತದಾನ ಮಾಡುವ ಕುರಿತು ಹಾಗೂ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅರಿವು ಮೂಡಿಸಲಾಗುತ್ತಿದೆ. ಚುನಾವಣಾ ಕಾರ್ಯದ ಭಾಗವಾಗಿ ವಿವಿಧ ಇಲಾಖೆಗಳಿಂದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳುವಾಗ ಈಗಾಗಲೇ ಮೊದಲನೇ ಹಂತದ ಮತಗಟ್ಟೆ ಸಿಬ್ಬಂದಿಯ ರ‌್ಯಾಂಡಮೈಸೇಷನ್ ಮಾಡಲಾಗಿದೆ ಎಂದು ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.

    ಸಭೆಯಲ್ಲಿ ಎಂಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್, ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಚುನಾವಣಾಧಿಕಾರಿಗಳಾದ ಡಾ. ಕೆ. ಹರೀಶ್ ಕುಮಾರ್, ಕೆ.ಎ. ದಯಾನಂದ್, ವಿನೋತ್ ಪ್ರಿಯಾ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts