More

    ಪೌರ ಕಾರ್ಮಿಕರೇ ಆರೋಗ್ಯದ ಮೇಲೆ ನಿಗಾವಹಿಸಿ

    ಬೀರೂರು: ಪಟ್ಟಣದ ನೈರ್ಮಲ್ಯದ ಸ್ವಚ್ಛತೆಯಲ್ಲಿ ತೊಡಗಿಕೊಳ್ಳುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಮೇಲೆ ಹೆಚ್ಚಿನ ನಿಗಾವಹಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಡಿ.ಶಾಂತಲಾ ಹೇಳಿದರು.
    ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಪಟ್ಟಣದ ಗಣಪತಿ ಪೆಂಡಾಲ್ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಪೌರಕಾರ್ಮಿಕರು ಮತ್ತು ಅವರ ಕುಟುಂಬದವರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
    ನಾಗರಿಕರ ಮೊದಲ ವೈದ್ಯ ಪೌರಕಾರ್ಮಿಕ. ಅವರ ಪ್ರಾಮಾಣಿಕ ಸೇವೆಯಿಂದ ಪಟ್ಟಣದ ಸೌಂದರ್ಯ ಹೆಚ್ಚಿಸುವ ಜತೆಗೆ ನಾಗರಿಕರ ಆರೋಗ್ಯ ಸುಧಾರಣೆಯಲ್ಲೂ ಪ್ರಮುಖ ಪಾತ್ರವಹಿಸುತ್ತಾರೆ. ಅಂತಹ ಪೌರಕಾರ್ಮಿಕ ತನ್ನ ಆರೋಗ್ಯದ ಬಗ್ಗೆ ಗಮನಹರಿಸುವುದಿಲ್ಲ. ಮದ್ಯಪಾನ, ತಂಬಾಕು ಸೇವನೆ ಮತ್ತು ಧೂಮಪಾನದಂತಹ ದುಶ್ಚಟಗಳಿಗೆ ದಾಸನಾಗುತ್ತಾನೆ. ಇದು ಆರೋಗ್ಯದ ಜತೆ ನಿಮ್ಮ ಕುಟುಂಬದ ನೆಮ್ಮದಿ ಹಾಳುಮಾಡುತ್ತಿದೆ. ಆದ್ದರಿಂದ ಸರ್ಕಾರವೇ ಅವರ ಜವಾಬ್ದಾರಿ ಹೊತ್ತು ಪೌರ ಕಾರ್ಮಿಕರು ಮತ್ತು ಅವರ ಕುಟುಂಬದವರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸುತ್ತಿದೆ ಎಂದರು.
    ಪತ್ರೆ.ಕೆ.ಶಿವಪ್ಪಯ್ಯ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ ರಕ್ತದೊತ್ತಡ, ಮಧುಮೇಹ ಪರೀಕ್ಷೆ ಮಾಡಿದರು. ಪೌರಕಾರ್ಮಿಕರಿಗೆ ವಿವಿಧ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾಗಿತ್ತು. ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ಆರ್.ಮೋಹನ್ ಕುಮಾರ್, ಪುರಸಭೆ ಸದಸ್ಯ ಬಿ.ಕೆ.ಶಶಿಧರ್, ಎನ್.ಎಂ.ನಾಗರಾಜ್, ಲೋಕೇಶಪ್ಪ, ಹಿರಿಯ ಆರೋಗ್ಯ ನಿರೀಕ್ಷಕ ಲಕ್ಷ್ಮಣ್, ಸಿಬ್ಬಂದಿಗಳಾದ ಸುಬ್ರಹ್ಮಣ್ಯ, ಬಸಣ್ಣ ಪೌರ ಕಾರ್ಮಿಕರಾದ ಪ್ರತಾಪ್, ಗಿರೀಶ್, ಬಾಬು, ಶಿವಕುಮಾರ್, ಧನಂಜಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts