More

    ಲಸಿಕೆ ಹಾಕಿಸಿಕೊಂಡಿರುವುದನ್ನು ಖಾತ್ರಿಪಡಿಸಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ ಸೂಚನೆ

    ನವದೆಹಲಿ: ತೀರ್ಥಯಾತ್ರೆ ಕೈಗೊಳ್ಳುವ, ಸಾಮೂಹಿಕವಾಗಿ ಸಭೆ ಸೇರುವ ಜನರು ಕರೊನಾ ಲಕ್ಷಣರಹಿತರಾಗಿದ್ದಾರೆಯೇ ಹಾಗೂ ಲಸಿಕೆ ಹಾಕಿಸಿಕೊಂಡಿದ್ದಾರೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಮುಂಬರುವ ತಿಂಗಳುಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ಯಾತ್ರೆ, ಉತ್ಸವಗಳು ನಡೆಯಲಿವೆ. ಈ ಸಂದರ್ಭದಲ್ಲಿ ಲಕ್ಷಾಂತರ ಜನರು ಒಟ್ಟುಗೂಡುವ ಸಾಧ್ಯತೆ ಇರುತ್ತದೆ. ಇಂತಹ ಸ್ಥಳಗಳು ಕೋವಿಡ್ ಸೇರಿದಂತೆ ಸಾಂಕ್ರಾಮಿಕ ರೋಗಗಳು ಪ್ರಸರಣಗೊಳ್ಳಲು ಅನುಕೂಲಕರ ಸ್ಥಳವಾಗಲಿವೆ. ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

    ಯಾತ್ರೆಗಳು, ಉತ್ಸವಗಳಲ್ಲಿ ನಡೆಯುವ ಪ್ರದೇಶಗಳಲ್ಲಿ ಪ್ರಾಥಮಿಕ ವ್ಯಾಕ್ಸಿನೇಷನ್​ಗೆ ವಿಶೇಷ ಚಾಲನೆ ನೀಡಬೇಕು. ಯಾತ್ರೆಯಲ್ಲಿ ಭಾಗವಹಿಸುವವರಿಗೆ ಮುನ್ನೆಚ್ಚರಿಕೆ ಡೋಸ್ ನೀಡುವ ಕ್ರಮವನ್ನು ಸ್ಥಳೀಯ ಆಡಳಿತ ತೆಗೆದುಕೊಳ್ಳಬೇಕು. ಕೋವಿಡ್ ಪರೀಕ್ಷೆ ಮತ್ತು ಕೋವಿಡ್ ನಿಯಂತ್ರಣ ನಿಯಮಗಳನ್ನು ಪಾಲಿಸುವುದರ ಬಗ್ಗೆ ಹೆಚ್ಚಿನ ಗಮನ ಹರಿಸುವ ಅವಶ್ಯಕತೆಯಿದೆಎಂದು ಭೂಷಣ್ ಸೂಚಿಸಿದ್ದಾರೆ.

    11,739 ಹೊಸ ಪ್ರಕರಣಗಳು: ದೇಶದಲ್ಲಿ ಮಂಗಳವಾರ 11,739 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, 27 ಸಾವುಗಳು ಸಂಭವಿಸಿವೆ. ಇದರೊಂದಿಗೆ ಕರೊನಾಗೆ ಈವರೆಗೆ ಬಲಿಯಾದವರ ಸಂಖ್ಯೆ 525047ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಕರೊನಾ ಪ್ರಕರಣಗಳ ಸಂಖ್ಯೆ 96,700ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 9,486 ಜನರು ಚೇತರಿಸಿಕೊಂಡಿದ್ದು, ಇದುವರೆಗೆ ಚೇತರಿಸಿಕೊಂಡವರ ಸಂಖ್ಯೆ 4,27,97,092ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೆಹಲಿಯಲ್ಲಿ 874 ಹೊಸ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ. 5.18 ಇದೆ.

    ಕೇರಳದಲ್ಲಿ ಮಾಸ್ಕ್ ಕಡ್ಡಾಯ: ಕೇರಳದಲ್ಲಿ ಕೋವಿಡ್ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದು, ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸ್ಥಳ, ಜನದಟ್ಟಣೆ ಪ್ರದೇಶ, ವಾಹನಗಳಲ್ಲಿ ಪ್ರಯಾಣ ಸಂದರ್ಭ, ಕಚೇರಿಗಳಲ್ಲಿ ಮಾಸ್ಕ್ ಕಡ್ಡಾಯ. ಮಾಸ್ಕ್ ಧರಿಸದವರಿಗೆ 500 ರೂ.ದಂಡ ವಿಧಿಸುವಂತೆ ಸರ್ಕಾರ ಪೊಲೀಸರಿಗೆ ಸೂಚನೆ ನೀಡಿದೆ. ಕೇರಳದಲ್ಲಿ ಸೋಮವಾರ ಕೋವಿಡ್ ಬಾಧಿತರ ಸಂಖ್ಯೆ 2,993 ಇತ್ತು. ದೇಶದಲ್ಲಿ ಅತ್ಯಧಿಕ ಕೋವಿಡ್ ರೋಗಿಗಳನ್ನು ಒಳಗೊಂಡ ರಾಜ್ಯಗಳಲ್ಲಿ ಕೇರಳ ಮೊದಲ ಸ್ಥಾನದಲ್ಲಿದೆ.

    ‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts