ಕರ್ನಾಟಕ ಚುನಾವಣೆ: ಬೀದಿಯಲ್ಲಿ ಸಿಕ್ತು ಝಣ ಝಣ ಕಾಂಚಾಣ! ಮರದ ಬುಡದಲ್ಲಿಯೂ ಗರಿ ಗರಿ ನೋಟು ಪತ್ತೆ

BJP vs Congress
Published on

ಬೆಂಗಳೂರು: ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿರುವ ಘಟನೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಕ್ಕಲಸಂದ್ರದಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿ ಆರ್.ಕೆ.ರಮೇಶ್ ಹಾಗೂ ಬಿಜೆಪಿ ಅಭ್ಯರ್ಥಿ ಆಗಿ ಎಂ.ಕೃಷ್ಣಪ್ಪ ಚುನಾವಣಾ ಕಣದಲ್ಲಿದ್ದಾರೆ. ಮನೆ ಮನೆಗೆ ತೆರಳಿ ಹಣ ಹಂಚಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪ ಮಾಡಿದರೆ, ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ದೂರಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿ ಬಿಗುವಿನ ಸ್ಥಿತಿ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸುಬ್ರಹ್ಮಣ್ಯಪುರ ಪೊಲೀಸರು ಸಮಸ್ಯೆ ಬಗೆಹರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಫ್ಲೈಯಿಂದ ಸ್ಕ್ವಾಡ್​, ಕಾಂಗ್ರೆಸ್ ಮುಖಂಡೆ ಶೋಭಾ ಗೌಡ ಮನೆಯಲ್ಲಿ ಪರಿಶೀಲನೆ ನಡೆಸಿತು. ಅಲ್ಲದೆ, ರಸ್ತೆ ಪಕ್ಕದೆಲ್ಲೆಲ್ಲ ಶೋಧ ಕಾರ್ಯ ನಡೆಸಿದಾಗ ಮರದ ಬುಡದಲ್ಲಿ ಹಣ ಪತ್ತೆಯಾಗಿದೆ. ಬ್ಯಾಗ್​ನಲ್ಲಿ ಮೂರು ಲಕ್ಷ ರೂ.ನಷ್ಟು ಹಣ ಪತ್ತೆಯಾಗಿದೆ.

ಹಣ ಪತ್ತೆ ಮತ್ತು ಜಟಾಪಟಿ ಹಿನ್ನೆಲೆಯಲ್ಲಿ ಕೆಲ ಕೈ, ಕಮಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net