ಸಿನಿಮಾ

ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಘರ್ಷಣೆ: ಕೈ ಅಭ್ಯರ್ಥಿ ರೈ ಕಾರಿನ ಮೇಲೆ ಕಲ್ಲುತೂರಾಟ

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್​-ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ಉಂಟಾಗಿದ್ದು, ಕೈ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲುತೂರಾಟ ನಡೆದಿದೆ.

ಮುಲ್ಕಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಈ ಘರ್ಷಣೆ ನಡೆದಿದೆ. ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ಇದನ್ನೂ ಓದಿ: 102ನೇ ವಯಸ್ಸಿನಲ್ಲೂ ಸಕ್ರಿಯ, ಈಕೆಗಿದೆ ಇನ್ನೂ ಹತ್ತು ವರ್ಷ ಬದುಕುವ ಯೋಚನೆ!

ಬೂತ್​ಗೆ ಅಭ್ಯರ್ಥಿ ಮಿಥುನ್ ರೈ ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದರು. ಆಗ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಘರ್ಷಣೆ ಉಂಟಾಗಿ, ಹೊಯ್​ಕೈ ನಡೆದಿದೆ. ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಈ ಮಗುವಿಗೆ ಮೂವರು ಪೇರೆಂಟ್ಸ್; ಇಲ್ಲಿ ಜನಿಸುತ್ತಿವೆ ‘ಡಿಸೈನರ್ ಬೇಬಿಸ್’!

ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಭೇಟಿ ನೀಡಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ಸ್ಥಳದಲ್ಲಿ ಕೆಎಸ್​ಆರ್​ಪಿ ತುಕಡಿ ನಿಯೋಜಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಂತೆ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ.

ಹನ್ನೊಂದರ ಈ ಹುಡುಗಿ ಐನ್​ಸ್ಟೀನ್​-ಸ್ಟೀಫನ್ ಹಾಕಿಂಗ್​ಗಿಂತಲೂ ಬುದ್ಧಿವಂತೆ!

ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಬೆಲೆಯಲ್ಲಿ ಭಾರಿ ಇಳಿಕೆ; ಕಾರಣ ಇದು..

Latest Posts

ಲೈಫ್‌ಸ್ಟೈಲ್