ಸಿನಿಮಾ

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ತಳ್ಳಾಟ; ಘೋಷಣೆ, ಧಿಕ್ಕಾರ ಕೂಗಿ ಆಕ್ರೋಶ!

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡದಲ್ಲಿ ಬಿಜೆಪಿ, ಕಾಂಗ್ರೆಸ್‌ ದ್ವೇಷ ರಾಜಕಾರಣ ಆರಂಭವಾಗಿದೆ. ಚುನಾವಣಾ ಪ್ರಚಾರ ನಿರತ ಕಾಂಗ್ರೆಸ್, ಬಿಜೆಪಿ ಗೂಂಡಾಗಿರಿ ಪ್ರದರ್ಶಿಸಿವೆ.

ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದಿದೆ. ಬೊಮ್ಮನಹಳ್ಳಿಯ ಹೊಂಗಸಂದ್ರದ ವೆಂಕಟರಮಣ ದೇವಾಲಯದ ಬಳಿ‌ ಘಟನೆ ನಡೆದಿದೆ.

ಇದನ್ನೂ ಓದಿ: VIDEO| ಬೈಕ್​​ ಮೇಲೆ ಕುಳಿತು ಪರಸ್ಪರ ಅಪ್ಪಿಕೊಂಡು ಲಿಪ್​ಲಾಕ್​ ​​ಮಾಡಿದ ಹುಡುಗಿಯರು!

ಇಂದು ಬೆಳಗ್ಗೆ ಹೊಂಗಸಂದ್ರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಮತಯಾಚನೆ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಉಮಾಪತಿ ಶ್ರೀನಿವಾಸ ಗೌಡ ಪತ್ನಿ ಸ್ಮಿತಾ ಚಾರ ಮಾಡುತ್ತಾ ಬಂದಿದ್ದರು. ಈ ಸಂದರ್ಭದಲ್ಲಿ ಎರಡು ಕಡೆಯ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ಎರಡು ಕಡೆಯವರ ನಡುವೆ ಘೋಷಣೆ ಹಾಗೂ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪ್ರಚಾರ ಮಾಡುತ್ತಿದ್ದ ವಾಹನಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ದೌಡಾಯಿಸಿದ ಬೊಮ್ಮನಹಳ್ಳಿ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಉಮಾಪತಿ ಶ್ರೀನಿವಾಸ್ ಗೌಡ ಪತ್ನಿ ಸ್ಮಿತಾ ಅವರಿಗೆ ಗಾಯಗಳಾಗಿದ್ದು, ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ಸಾಕಮ್ಮ ನಾವರುಗೂ ಗಾಯಗಳಾಗಿವೆ. ಸಾಕಮ್ಮ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಲಿತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಕಡೆಯವರು ಆರೋಪ ಮಾಡಿದ್ದಾರೆ. ಇತ್ತ ಕಾಂಗ್ರೆಸ್ ನವರಿಂದಲೂ ಕೂಡ ಬಿಜೆಪಿಯವರ ಮೇಲೆ ಗಂಭೀರ ಆರೋಪ ಮಾಡಿದೆ. ದಿನದಿಂದ ದಿನಕ್ಕೆ ಬೊಮ್ಮನಹಳ್ಳಿ ಪ್ರತಿಷ್ಠೆಯ ಕಣವಾಗುತ್ತಿದೆ.

ಎಸ್​ಎಸ್​​ಎಲ್​​ಸಿ ಫಲಿತಾಂಶ ಪ್ರಕಟಣಾ ದಿನಾಂಕ ನಿಗದಿ

Latest Posts

ಲೈಫ್‌ಸ್ಟೈಲ್