ಪರೀಕ್ಷೆಯಲ್ಲಿ ಕಡಿಮೆ ಅಂಕ: 19 ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾವಿಗೆ ಶರಣು! |Student

death jaipura
Published on

Student : ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಕಾರಣದಿಂದ ಮನನೊಂದು 10 ನೇ ತರಗತಿ ವಿದ್ಯಾರ್ಥಿ 19 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

ಆಶ್ಮಾನ್ ಕುಮಾರ್ ಮೃತ ಎಂದು ತಿಳಿದುಬಂದಿದೆ.

ಖಾಸಗಿ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಈತ ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದರಿಂದ ಖಿನ್ನತೆಗೆ ಒಳಗಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಸಂಜೆ ಆತನ ತಂದೆ ಮಗಳ ಬಳಿ ಯಾಕೆ ಸುಮ್ಮನಿದ್ದೀಯ ಎಂದು ಕೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಈತ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿರುವುದಾಗಿ ಹೇಳಿದ್ದಾನೆ. ಪಾಲಕರು ರೂಮ್​ ಒಳಗೆ ಹೋದ  ನಂತರ, ವಿದ್ಯಾರ್ಥಿ ಬಾಲ್ಕನಿಯಿಂದ ಜಿಗಿದಿದ್ದಾನೆ. ಈತ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ವಿದ್ಯಾರ್ಥಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ವಿಚಾರವಾಗಿ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net