More

    ಬಾಲ್ಕನಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು: ಆತ್ಮಹತ್ಯೆಯೋ ಅಥವಾ ಕೊಲೆಯೋ?

    ನೋಯ್ಡಾ: ನೋಯ್ಡಾ ಹೊರವಲಯದಲ್ಲಿ ಗುರುವಾರ ನಡೆದ ಆಘಾತಕಾರಿ ಘಟನೆಯಲ್ಲಿ ವಿದ್ಯಾರ್ಥಿನಿ 18 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯ ಹಿಮಾಲಯ ಪ್ರೈಡ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಮೃತರು 12ನೇ ತರಗತಿಯ ವಿದ್ಯಾರ್ಥಿನಿ ಎಂದು ಹೇಳಲಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

    ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಕುರಿತು ತನಿಖೆ ಆರಂಭಿಸಿದ್ದಾರೆ. ಗುರುವಾರ ಸಂಜೆ 7 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಬಾಲ್ಕನಿಯಲ್ಲಿ ಗಿಡಗಳಿಗೆ ನೀರು ಹಾಕುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

    ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ?
    ಮಾಧ್ಯಮ ವರದಿಗಳ ಪ್ರಕಾರ ಘಟನೆಯ ವೇಳೆ ಕುಟುಂಬಸ್ಥರು ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳದಿಂದ ಪೊಲೀಸರು ಯಾವುದೇ ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿಲ್ಲ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದಾಗಿ ಪೊಲೀಸರು ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಕಟ್ಟಡದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳನ್ನೂ ಪೊಲೀಸರು ಸ್ಕ್ಯಾನ್ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಹುಡುಗಿಯ ತಂದೆ ದೆಹಲಿಯ ಶಾಲೆಯೊಂದರಲ್ಲಿ ಶಿಕ್ಷಕರಾಗಿದ್ದಾರೆ. ಆದರೆ, ವಿದ್ಯಾರ್ಥಿನಿಯ ಹೆಸರು ಮತ್ತು ಗುರುತು ಇನ್ನೂ ಬಹಿರಂಗವಾಗಿಲ್ಲ.

    ಕಟ್ಟಡದಿಂದ ಬಿದ್ದು 14 ವರ್ಷದ ವಿದ್ಯಾರ್ಥಿ ಸಾವು
    ಒಂದು ದಿನದ ಹಿಂದೆಯಷ್ಟೇ, 7 ನೇ ತರಗತಿ ವಿದ್ಯಾರ್ಥಿಯು ಹತ್ತಿರದ ಸೊಸೈಟಿಯ ಕಟ್ಟಡದ 22 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ, ವಿದ್ಯಾರ್ಥಿಯು ಪರೀಕ್ಷೆಗೆ ಸಂಬಂಧಿಸಿದಂತೆ ಒತ್ತಡದಲ್ಲಿದ್ದರು ಎಂದು ಹೇಳಲಾಗುತ್ತಿದೆ.

    ಚುನಾವಣಾ ಬಾಂಡ್‌: 1368 ಕೋಟಿ ರೂ.ದೇಣಿಗೆ ನೀಡಿದ ಸ್ಯಾಂಟಿಯಾಗೊ ಮಾರ್ಟಿನ್ ಯಾರು?, ಕಾರ್ಮಿಕನೊಬ್ಬ ಲಾಟರಿ ಕಿಂಗ್ ಆಗಿದ್ದು ಹೇಗೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts