ಮೂಲ್ಕಿ: ವಿದ್ಯಾಸಂಸ್ಥೆ ಎಂದರೆ ಅದು ಕೇವಲ ವಿದ್ಯಾರ್ಥಿಗಳಿಗೆ ಜ್ಞಾನ ನೀಡುವ ದೇಗುಲ ಮಾತ್ರವಲ್ಲ ವಿದ್ಯಾರ್ಥಿಗಳು ಶಿಕ್ಷಕರು ಮತ್ತು ಸಿಬ್ಬಂದಿ ಒಳಗೊಂಡ ಕುಟುಂಬವಿದ್ದಂತೆ. ಶೈಕ್ಷಣಿಕ ಅವಧಿ ಮುಗಿದ ಬಳಿಕವೂ ವಿದ್ಯಾರ್ಥಿಗಳು ಸಂಸ್ಥೆಯ ಜತೆ ನಿರಂತರ ಸಂಬಂಧ ಉಳಿಸಿಕೊಳ್ಳಬೇಕು ಎಂದು ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ ಹೇಳಿದರು. ಕಿಲ್ಪಾಡಿ ಮೆಡಲಿನ್ ಪದವಿಪೂರ್ವ ಕಾಲೇಜಿನ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಂಶುಪಾಲೆ ಲೀಡಿಯ ಶಾಂತಿ ಮೆಂಡೋನ್ಸ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳ ಅರಿವು ಹಾಗೂ ಸಾಮಾಜಿಕ ಕಳಕಳಿಯನ್ನು ಮೈಗೂಡಿಸಬೇಕು ಎಂದರು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.98.5 ಅಂಕ ಗಳಿಸಿದ ವಾಣಿಜ್ಯ ವಿಭಾಗದ ಹರ್ಷಿತ ಆರ್.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವಿಶಾಂತ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮ ಸಂಯೋಜಕರಾದ ವಾಣಿಶ್ರೀ ಭಟ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಿಶಾ ಪಾಯಲ್ ಸ್ವಾಗತಿಸಿದರು. ಕ್ಲಾರಿಶಾ ಡಿಸೋಜ ವಂದಿಸಿದರು. ರೀಮಾ ಕಾರ್ಯಕ್ರಮ ನಿರೂಪಿಸಿದರು.