ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲಾತಿ ಪ್ರಕಟ

election
Published on

ಬೆಂಗಳೂರು: ಮುಂಬರಲಿರುವ ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಇಂದು ರಾಜ್ಯ ಚುನಾವಣಾ ಆಯೋಗ ವರ್ಗವಾರು ಮೀಸಲಾತಿಯನ್ನು ಪ್ರಕಟಿಸಿದೆ.

ಈ ಕುರಿತು ಚುನಾವಣಾ ಆಯೋಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗೆ ಪ್ರತ್ಯೇಕವಾದ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಗೆಜೆಟ್​ನಲ್ಲಿ ಇದು ಪ್ರಕಟವಾಗಿದೆ.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಒಟ್ಟು ಸ್ಥಾನಗಳಿಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಅಂದರೆ ಒಟ್ಟು ಸ್ಥಾನಗಳಲ್ಲಿ ಯಾವ ಯಾವ ವರ್ಗಗಳಿಗೆ ಎಷ್ಟು ಸ್ಥಾನಗಳು ಎಂಬುದನ್ನು ಬಹಿರಂಗಪಡಿಸಲಾಗಿದೆ.

ಇದೇ ಮೇನಲ್ಲಿ ರಾಜ್ಯದ ಬಹುತೇಕ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯ ಅವಧಿ ಮುಗಿಯಲಿದೆ. ಈ ತಿಂಗಳು ಚುನಾವಣೆ ನಡೆಯಬೇಕಿತ್ತು. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಮುಂದಿನ ಆರು ತಿಂಗಳವರೆಗೆ ಯಾವುದೇ ಚುನಾವಣೆ ಇಲ್ಲ ಎಂದು ಮುಖ್ಯಮಂತ್ರಿಯವರು ಆದೇಶ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net