More

    ಸ್ವಚ್ಛ ವಾತಾವರಣ ಹಾಗೂ ಪೌಷ್ಟಿಕ ಆಹಾರದಿಂದ ಉತ್ತಮ ಆರೋಗ್ಯ

    ದೇವದುರ್ಗ: ಶುದ್ಧ ಕುಡಿವ ನೀರು, ಸ್ವಚ್ಛ ವಾತಾವರಣ ಹಾಗೂ ಪೌಷ್ಟಿಕ ಆಹಾರದಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ವಾಸ ಸ್ಥಾನದ ಸುತ್ತಮುತ್ತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿ ಸೊಳ್ಳೆ ಉತ್ಪತ್ತಿಯಾಗದಂತೆ ತಡೆದರೆ ಸಾಂಕ್ರಾಮಿಕ ರೋಗದಿಂದ ದೂರವಿರಬಹುದು ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಬನದೇಶ್ವರ ಹೇಳಿದರು.

    ಇದನ್ನೂ ಓದಿ: ಬಿಸಿಲೂರು ಬಳ್ಳಾರಿ ಜಿಲ್ಲೆಯಲ್ಲಿ ಡೆಂಘೆ ದಾಂಗುಡಿ

    ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಡೆಂಘೆ ನಿವಾರಣೆ ದಿನಾಚರಣೆ ಹಾಗೂ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಂಗಳವಾರ ಮಾತನಾಡಿದರು. ಸೊಳ್ಳೆಗಳಿಂದ ನಾನಾ ರೋಗ ಹರಡುತ್ತಿವೆ. ಚಿಕೂನ್ ಗುನ್ಯಾ, ಮಲೇರಿಯಾ, ಡೆಂಘೆ ಸೇರಿ ಸಾಂಕ್ರಾಮಿಕ ರೋಗಗಳು ಬರುತ್ತಿವೆ ಎಂದರು.

    ಮಳೆ ಬಂದಾಗ ಎಲ್ಲೆಂದರಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿವೆ. ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ. ಮಹಿಳೆಯರು, ಮಕ್ಕಳು, ವೃದ್ಧರು ಆರೋಗ್ಯದ ಕಾಳಜಿ ಮಾಡಿಕೊಳ್ಳಬೇಕು. ಡೆಂಘೆ ಮಾರಕವಾದ ರೋಗವಾಗಿದ್ದು ಯಾರೂ ಕೂಡ ನಿರ್ಲಕ್ಷ್ಯ ಮಾಡಬಾರದು. ಆರಂಭದಲ್ಲೆ ಚಿಕಿತ್ಸೆ ಪಡೆದರೆ ರೋಗ ತಡೆಯಬಹುದು. ಈ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಜನರಲ್ಲಿ ಅರಿವು ಮೂಡಿಸಬೇಕು ಎಂದು ಡಾ.ಬನದೇಶ್ವರ ಹೇಳಿದರು.

    ನಂತರ ವಿವಿಧ ಬಡಾವಣೆಗಳಲ್ಲಿ ಜಾಗೃತಿ ಮೂಡಿಸಲಾಯಿತು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ ಮೂಡಲಗುಂಡ, ಮಹಮದ್ ಅಲಿ ಪಾಷಾ, ಹನುಮಂತ, ಅಂಜೆಮ್ಮ, ನೇತ್ರಾವತಿ, ಹೊನ್ನಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts