ಕಾರವಾರ: ಪ್ರತಿಯೊಬ್ಬರು ಸ್ವ ಪ್ರೇರಣೆಯಿಂದ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚತೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.
ಅವರು ಭಾನುವಾರ ಹೊನ್ನಾವರದ ಮೂಡಗಣಪತಿ ಸಭಾಭವನದಲ್ಲಿ ಸ್ವಚ್ಚತೆಯೇ ಸೇವೆ ಪಾಕ್ಷಿಕ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.
ಉತ್ತರ ಕನ್ನಡ ಜಿಲ್ಲೆ ಸುಂದರ ಪ್ರಕೃತಿಯ ಸೌಂದರ್ಯವನ್ನು ಹೊಂದಿದ್ದು, ಶೇ.82 ರಷ್ಟು ಅರಣ್ಯ ಪ್ರದೇಶದಿಂದ ಕೂಡಿದೆ. ಇಂತಹ ಪ್ರಕೃತಿಯನ್ನು ಹಾಗೂ ಕಡಲ ತೀರ ಪ್ರದೇಶಗಳನ್ನು ಮಲೀನಗೊಳಿಸದೇ ಸುಂದರವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಜಿಲ್ಲೆಯಾದ್ಯಂತ ಸೆಪ್ಟಂಬರ್ 17 ರಿಂದ ಆಯೋಜಿಸುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ, ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ವಿವಿಧ ಚಟುವಟಿಕೆಗಳಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ಸ್ವಚ್ಛತೆಯೇ ಸೇವಾ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಹೊನ್ನಾವರ ಪಟ್ಟಣ ಪಂಚಾಯತ್ ಅಧ್ಯಕ್ಷ ನಾಗರಾಜ ಭಟ್, ಉಪಾಧ್ಯಕ್ಷ ಸುರೇಶ ಹೊನ್ನಾವರ, ಜಿಲ್ಲಾಧಿಕಾರಿ ಕೆ. ಲಕ್ಷಿö್ಮÃ ಪ್ರಿಯಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ, ಉಪ ವಿಭಾಗಾಧಿಕಾರಿಗಳಾದ ಕನಿಷ್ಕ, ಡಾ. ನಯನಾ ಮತ್ತಿತರರು ಇದ್ದರು.
ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ
You Might Also Like
Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…
ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…
ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…
ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach ) ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…
Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..
ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan) ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…