ಪಡುಪೆರಾರ ಹೆದ್ದಾರಿ ಬದಿಯಲ್ಲಿ ಸ್ವಚ್ಛತಾ ಕಾರ್ಯ

New Project (12)
Published on

ಗುರುಪುರ: ಪಡುಪೆರಾರ ಗ್ರಾ.ಪಂ. ವ್ಯಾಪ್ತಿಯ ಬಜ್ಪೆ-ಗುರುಪುರ ಕೈಕಂಬ ರಾಜ್ಯ ಹೆದ್ದಾರಿಯ ಪುಚ್ಚಳ, ಅಡ್ಕಬಾರೆ, ಪೆರಾರ ಮತ್ತಿತರ ಕಡೆಯಲ್ಲಿ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷ, ಪಿಡಿಒ ನೇತೃತ್ವದ ಸ್ವಯಂ-ಸೇವಕರು ಫೆ.2ರಂದು ಹೆದ್ದಾರಿ ಬದಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನಡೆಸಿದರು.

ಪಂಚಾಯಿತಿ ಕಚೇರಿ ಪಕ್ಕದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ಬದಿಯಿಂದ ಸ್ವಚ್ಛತಾ ಕಾರ್ಯ ಆರಂಭಗೊಂಡಿದೆ. ತ್ಯಾಜ್ಯ ಸಂಗ್ರಹಿಸಿ ಸಾಗಿಸಲು ಲಾರಿ ಬಳಸಲಾಗಿದ್ದು, ಮಧ್ಯಾಹ್ನದ ವೇಳೆಗೆ ನಾಲ್ಕೈದು ಲೋಡ್ ತ್ಯಾಜ್ಯ ತೆರವುಗೊಳಿಸಲಾಗಿದೆ. ಸ್ವಯಂ ಮುತುವರ್ಜಿ ವಹಿಸಿದ್ದ ಪಿಡಿಒ ಉಗ್ಗಪ್ಪ ಮೂಲ್ಯ, ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಜಯಂತ ಪೂಜಾರಿ ಅವರು ಸ್ವಯಂ ಸೇವಕರ ಜತೆಗೂಡಿ ತ್ಯಾಜ್ಯ ವಿಲೇವಾರಿ ಮಾಡಿದರು.

ಪಿಡಿಒ ಉಗ್ಗಪ್ಪ ಮೂಲ್ಯ, ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಜಯಂತ ಪೂಜಾರಿ, ಸದಸ್ಯರಾದ ಅಮಿತಾ ಶೆಟ್ಟಿ, ಯಶವಂತ ಪೂಜಾರಿ, ಬಿಜೆಪಿ ಮುಖಂಡರಾದ ಅನಿಲ್, ಅನುರಾಜ್, ಪದ್ಮನಾಭ ನೀರಳಿಕೆ, ಹರಿಪ್ರಸಾದ್, ಪೆರಾರ ಫ್ರೆಂಡ್ಸ್ ಕ್ಲಬ್ ಸದಸ್ಯರು, ಬಿಲ್ ಕಲೆಕ್ಟರ್ ಭೋಜ ನಾಯ್ಕ, ಗ್ರಂಥಾಲಯ ಮೇಲ್ವಿಚಾರಕ ಭರತ್ ಕುಮಾರ್ ವಿ., ಪಡುಪೆರಾರ ಪಂಚಾಯಿತಿ ಸ್ವಚ್ಛತಾ ವಾಹಿನಿ ಸಿಬ್ಬಂದಿ, ಪಂಚಾಯಿತಿ ಸಂಜೀವಿನಿ ಒಕ್ಕೂಟದ ಪ್ರಜ್ಞಾ, ಸ್ಥಳೀಯ ಸಂಘ-ಸಂಸ್ಥೆ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ತ್ಯಾಜ್ಯ ಎಸೆಯುವವರ ವಿರುದ್ಧ ಕಟ್ಟುನಿಟ್ಟಾದ ಕಾನೂನು ಕ್ರಮ ಕೈಗೊಂಡಿದ್ದೇನೆ. ನನ್ನ ಈವರೆಗಿನ ಅಧಿಕಾರ ಅವಧಿಯಲ್ಲಿ ಅಧ್ಯಕ್ಷರು, ಸದಸ್ಯರ ಸಹಕಾರ, ಸಂಘ-ಸಂಸ್ಥೆಗಳ ಬೆಂಬಲದೊಂದಿಗೆ ಹಲವು ಬಾರಿ ರಾಜ್ಯ ಬಜ್ಪೆಯಿಂದ ಗುರುಪುರ ಕೈಕಂಬದ ವರೆಗೆ ರಾಜ್ಯ ಹೆದ್ದಾರಿ ಬದಿಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ್ದೇನೆ. ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಸಾವಿರದಿಂದ 5,000 ರೂ. ವರೆಗೆ ದಂಡ ಹೇರಿದ್ದೇನೆ. ಈ ಬಾರಿ ತ್ಯಾಜ್ಯ ತೆರವು ಕಾರ್ಯಾಚರಣೆ ವೇಳೆ ತ್ಯಾಜ್ಯ ರಾಶಿಯಲ್ಲಿ ಲಭಿಸಿರುವ ಕೆಲವು ಅಧಿಕೃತ ಕಾಗದಪತ್ರ ಆಧರಿಸಿ, ತಪ್ಪಿತಸ್ಥರ ವಿರುದ್ಧ ದಂಡ ಹೇರಲಾಗುವುದು. ಉಗ್ಗಪ್ಪ ಮೂಲ್ಯ, ಪಿಡಿಒ https://www.vijayavani.net/mangalore-pedamale-brammakalsha-hore-kanike https://www.vijayavani.net/bc-road-kanchana-honda-showroom-tenth-anniversary

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net