

ಹಳೆಯಂಗಡಿ: ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸರ್ಫಿಂಗ್ ಖ್ಯಾತಿಯ ಸಸಿಹಿತ್ಲು ಮುಂಡಾ ಬೀಚ್‌ನಲ್ಲಿ ಸ್ವಚ್ಛತೆ, ಜಲಸಾಹಸದ ಕ್ರೀಡೆ ನಡೆದು ಬೃಹತ್ ಮಾನವ ಸರಪಣಿ ನಡೆಯಿತು.
ರಾಜ್ಯ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಾಣಿಕ್ಯ ಮಾತನಾಡಿ, ಯುವ ಸಮಾಜ ದೇಶದ ಗೌರವ ಹಾಗೂ ಅಖಂಡತೆ ರಕ್ಷಿಸುವ ಸಂವಿಧಾನದ ಆಶಯಗಳನ್ನು ಗೌರವಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಆಳ್ವಾಸ್ ಶಿಕ್ಷಣ ಸಂಸ್ಥೆ ವಿವೇಕ ಆಳ್ವ, ಕೆಮ್ರಾಲ್ ಗ್ರಾಪಂ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿಸೋಜಾ, ಆಳ್ವಾಸ್ ಸಂಸ್ಥೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.