ವಿರಾಜಪೇಟೆ: ಪಟ್ಟಣದ ಸೇಂಟ್ ಆನ್ಸ್ ಪದವಿ ಕಾಲೇಜಿನ ಎನ್ನೆಸ್ಸೆಸ್ಸ್ ಘಟಕದ ವಿದ್ಯಾರ್ಥಿಗಳು ಎನ್ನೆಸ್ಸೆಸ್ಸ್ ದಿವಸದ ಪ್ರಯುಕ್ತ ಮಂಗಳವಾರ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿತ್ತು.
ಸ್ವಚ್ಛತಾ ಹೈ ಸೇವಾ ಎಂಬ ಧ್ಯೇಯ ವಾಕ್ಯದಡಿ ಶ್ರಮದಾನ ನಡೆಯಿತು. ಕಾಲೇಜಿನ ವ್ಯವಸ್ಥಾಪಕರು ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಮಾಜದ ಒಳಿತು ರಾಷ್ಟ್ರೀಯ ಸೇವಾ ಯೋಜನೆಯ ಉದ್ದೇಶವಾಗಿದ್ದು, ವಿದ್ಯಾರ್ಥಿಗಳು ಸಮಾಜ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸಬೇಕು ಎಂದು ರೆ.ಫಾ.ಮದಲೈ ಸಲಹೆ ನೀಡಿದರು.
ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಿಶ್ವನಾಥ್ ಸಿಂಪಿ ಮಾತನಾಡಿ, ಸ್ವಚ್ಛತಾ ಅಭಿಯಾನ ಎನ್ನೆಸ್ಸೆಸ್‌ನ ಧ್ಯೇಯವಾಗಿದ್ದು ವಿದ್ಯಾರ್ಥಿಗಳು ತಮ್ಮ ಸೇವೆಯನ್ನು ಸಮಾಜಕ್ಕೆ ಸಲ್ಲಿಸುತ್ತಿರುವುದು ಗಮನಾರ್ಹ ಎಂದರು.
ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮಾ, ಸಾರ್ವಜನಿಕ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಮಹೇಶ್, ಕಚೇರಿ ಸಿಬ್ಬಂದಿ ಇಂದುಲೇಖ, ಹಿರಿಯ ಸುಶ್ರುಸಕಿ ಸುಲೋಚನಾ, ಉಪನ್ಯಾಸಕರಾದ ಅರ್ಜುನ್, ವಿಲೀನ, ಶಶಿಕಲಾ ಇತರರಿದ್ದರು. ಎನ್ನೆಸ್ಸೆಸ್ ವಿದ್ಯಾರ್ಥಿಗಳು ಆಸ್ಪತ್ರೆ ಆವರಣದಲ್ಲಿ ಶ್ರಮದಾನ ಮಾಡಿದರು.