More

    ಸ್ವಚ್ಛತೆ, ಪರಿಸರ ಪಾಠ ಕಲಿಸಿದ ಶಿಬಿರ

    ಶಿರಸಿ: ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಗೈಡ್ಸ್ ವಿಭಾಗದ ವಿದ್ಯಾರ್ಥಿಗಳಿಂದ ಸಿದ್ದಾಪುರ ತಾಲೂಕಿನ ಸರಕುಳಿಯ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನಕ್ಕೆ ಹೊರಸಂಚಾರ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

    ವಿದ್ಯಾರ್ಥಿಗಳು ದೇವರ ದರ್ಶನದೊಂದಿಗೆ ಭಜನೆ ಹಾಗೂ ದೇವಸ್ಥಾನದ ಸುತ್ತಮುತ್ತಲೂ ಸ್ವಚ್ಛತೆ ಮಾಡಿ, ಚಾರಣ ಮೂಲಕ ಶಿಬಿರ ಸ್ಥಳ ಅಘನಾಶಿನಿ ನದಿ ದಂಡೆಗೆ ಪ್ರಯಾಣಿಸಿದರು. ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ ಹಾಗೂ ಮೆಮೊರಿ ಟೆಸ್ಟ್ ಸ್ಪರ್ಧೆ, ಅಡುಗೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಾಚಾರ್ಯ ಶಶಾಂಕ ಹೆಗಡೆ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಹೊಳೆ ದಡದ ಮೇಲೆ ಅಡುಗೆ ಮಾಡಿದ್ದು, ಸ್ವಚ್ಛ ಮಾಡಿದ್ದು ಇಂತಹ ನೆನಪುಗಳು ಯಾವಾಗಲೂ ಮರೆಯಲಾರದ ಅನುಭವ ಎಂದರು.

    ಸಾಗರದ ವಾಣಿಜ್ಯ ತೆರಿಗೆ ಅಧಿಕಾರಿ ಎನ್. ಮಂಜುಳಾ ಅವರು ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಚಳವಳಿಯಲ್ಲಿ ಭಾಗಿಗಳಾಗಿ ತಮ್ಮ ಜೀವನದುದ್ದಕ್ಕೂ ಶಿಸ್ತು, ಸಂಯಮ, ದೇಶ ಭಕ್ತಿಯನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಉತ್ತಮ ಪ್ರಜೆ ಆಗಬೇಕು ಎಂದರು. ದೇವಸ್ಥಾನದ ಅಧ್ಯಕ್ಷ ಜಿ.ಎಸ್. ಹೆಗಡೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾಸಂಸ್ಥೆಯ ರಾಜ್ಯ ಸಂಘಟನಾ ಆಯುಕ್ತ ವೀರೇಶ ಮಾದರ ಅವರು ಮಕ್ಕಳಿಗೆ ಶುಭ ಹಾರೈಸಿದರು. ಶಾಲೆಯ ಗೈಡ್ ಕ್ಯಾಪ್ಟನ್ ಚೇತನಾ ಪಾವಸ್ಕರ್ ಸ್ವಾಗತಿಸಿದರು. ಸ್ಕೌಟ್ ಮಾಸ್ಟರ್ ರಾಘವೇಂದ್ರ ಹೊಸೂರು ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts