ಕೋಟ: ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ 248ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ ಅಂಗವಾಗಿ ಕುಂಭಾಶಿ ಶ್ರೀ ನಾಗಾಚಲ ಶ್ರೀ ಶಂಕರ ಪೀಠದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತಾ ಬಾಯರಿ, ಸಂಘಟನಾ ಕಾರ್ಯದರ್ಶಿ ಗಿರೀಶ ಆಚಾರ್ ಅವರನ್ನು ಗೌರವಿಸಲಾಯಿತು.
ಶ್ರೀ ನಾಗಾಚಲ ಶ್ರೀ ಶಂಕರ ಪೀಠದ ಧರ್ಮದರ್ಶಿ ಲೋಕೇಶ್ ಅಡಿಗ, ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಹಂದಟ್ಟು ಮಹಿಳಾ ಬಳಗದ ಸ್ಥಾಪಾಕಾಧ್ಯಕ್ಷೆ ಪುಷ್ಪಾ ಕೆ.ಹಂದಟ್ಟು, ಜೆಸಿಐ ಸೀನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಅಜಿತ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್ ಉಪಸ್ಥಿತರಿದ್ದರು. ರವೀಂದ್ರ ಕೋಟ ಕಾರ್ಯಕ್ರಮ par ಸಂಯೋಜಿಸಿದರು.