ಸಿನಿಮಾ

ಸ್ವಚ್ಛತೆ ಕಾಪಾಡಿ ಡೆಂಗ್ಯೂ ನಿಯಂತ್ರಿಸಿ: ಆರೋಗ್ಯ ನೀರಿಕ್ಷಣಾಧಿಕಾರಿ ಗವಿಸಿದ್ದಪ್ಪ ಗೊಂದಿಹೊಸಳ್ಳಿ ಸಲಹೆ

ಅಳವಂಡಿ: ಮನೆಯ ಒಳಗೆ, ಹೊರಗೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕಿದ್ದು, ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಗಟ್ಟಿದಾಗ ಮಾತ್ರ ಡೆಂಗ್ಯೂ ರೋಗವನ್ನು ನಿಯಂತ್ರಿಸಬಹುದು ಎಂದು ಆರೋಗ್ಯ ನೀರಿಕ್ಷಣಾಧಿಕಾರಿ ಗವಿಸಿದ್ದಪ್ಪ ಗೊಂದಿಹೊಸಳ್ಳಿ ಹೇಳಿದರು.


ಹೈದರನಗರ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ಕೊಪ್ಪಳ, ಪ್ರಾಥಮಿಕ ಆರೋಗ್ಯ ಕೇಂದ್ರ ಕವಲೂರು ವತಿಯಿಂದ ರಾಷ್ಟ್ರೀಯ ಡೆಂಗ್ಯೂ ದಿನ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದರು.

ಇದನ್ನೂ ಓದಿ: ಮಕ್ಕಳಿಗೆ ಜ್ವರ ಬಂದರೆ ಆಸ್ಪತ್ರೆಗೆ ದಾಖಲಿಸಿ ; ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾರ್ಗದರ್ಶನ

ಸೊಳ್ಳೆ ಪರದೆಗಳನ್ನು ಬಳಸಬೇಕು

ಡೆಂಗ್ಯೂ ನಿಯಂತ್ರಣಕ್ಕೆ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಸೊಳ್ಳೆ ಪರದೆಗಳನ್ನು ಬಳಸಬೇಕು. ಮನೆಯಲ್ಲಿ ನೀರು ಶೇಖರಣಾ ಪರಿಕರಗಳನ್ನು ಮುಚ್ಚಿಡಬೇಕು. ಯಾವುದೇ ತರಹದ ಜ್ವರ ಇದ್ದರೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು.

ಡೆಂಗ್ಯೂ ರೋಗದ ಲಕ್ಷಣಗಳಾದ ತೀವೃತರವಾದ ತಲೆ ನೋವು, ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವ ಗುರುತು, ಬಾಯಿ, ಮೂಗು, ಮತ್ತು ಒಸಡುಗಳಿಂದ ರಕ್ತಸ್ರಾವ, ವಾಕರಿಕೆ, ವಾಂತಿ ಕಂಡು ಬಂದರೆ ತಕ್ಷಣ ವೈದ್ಯರ ಸಲಹೆ ಪಡೆಯಬೇಕು ಎಂದರು. ಸಮುದಾಯ ಆರೋಗ್ಯ ಅಧಿಕಾರಿ ಆಸ್ಮಾ, ಆಶಾ ಕಾರ್ಯಕರ್ತೆಯರಾದ ಮೀನಾಕ್ಷಿ, ಗುಣಸಾಗರಮ್ಮ, ಗ್ರಾಮಸ್ಥರು ಇತರರಿದ್ದರು.

Latest Posts

ಲೈಫ್‌ಸ್ಟೈಲ್