More

    ಶುಚಿತ್ವಕ್ಕೆ ಆದ್ಯತೆ ನೀಡಿ

    ಗಂಗಾವತಿ: ಬಿಸಿಯೂಟದಿಂದ ಅಸ್ವಸ್ಥಗೊಂಡಿದ್ದ ತಾಲೂಕಿನ ಸಂಗಾಪುರ ಸ.ಕಿ.ಪ್ರಾ.ಶಾಲೆಗೆ ಜೆಎಂಎ್ಸಿ ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ ಗಾಣಿಗೇರ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

    ಇದನ್ನೂ ಓದಿ: ಜನತಾ ಕಾಲನಿಯಲ್ಲಿ ಆಶುಚಿತ್ವ ತಾಂಡವ

    ಬಿಸಿಯೂಟದಿಂದ ಒಬ್ಬ ಶಿಕ್ಷಕಿ ಮತ್ತು 32 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟಿಸಿದ್ದರು. ಮಾಹಿತಿ ಪಡೆದ ನ್ಯಾಯಾಧೀಶ ರಮೇಶ ಗಾಣಿಗೇರ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

    ಕುಡಿವ, ಬಳಕೆ ನೀರು, ಶೌಚಗೃಹ, ಬಿಸಿಯೂಟ ಕೋಣೆ, ಮೈದಾನ ಮತ್ತು ನೈರ್ಮಲೀಕರಣ ವ್ಯವಸ್ಥೆಯನ್ನು ಪರಿಶೀಲಿಸಿದರು. ಪ್ರಭಾರ ಮುಖ್ಯಶಿಕ್ಷಕ ಶರಣಬಸವರಿಂದ ಪ್ರಕರಣದ ಮಾಹಿತಿ ಪಡೆದುಕೊಂಡರಲ್ಲದೇ ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಶಿಕ್ಷಕರಿಗೆ ಸೂಚನೆ ನೀಡಿದರು.

    ನೀರು ಸಂಗ್ರಹ ತೊಟ್ಟಿ ವೀಕ್ಷಿಸಿ, ಸ್ವಚ್ಛತೆ ಕಾಪಾಡದಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದರು. ಪರಿಸರ ಸ್ವಚ್ಛತೆಯ ಜತೆಗೆ ಮಕ್ಕಳ ಆರೋಗ್ಯದತ್ತ ಗಮನಹರಿಸಬೇಕು. ಬೇಸಿಗೆ ಹಿನ್ನೆಲೆಯಲ್ಲಿ ಬಿಸಿಲಿಗೆ ಮಕ್ಕಳನ್ನು ಹೊರಗಡೆ ಕಳುಹಿಸದಂತೆ ಸಲಹೆ ನೀಡಿದರು. ಶಿಕ್ಷಕಿ ಶೋಭಾ ಸೇರಿ ಎಸ್ಡಿಎಂಸಿ ಸದಸ್ಯರು ಮತ್ತು ಪಾಲಕರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts