ಮಸ್ಕಿ: ಗ್ರಾಮೀಣ ಪ್ರದೇಶದ ಜನರು ಸ್ವಚ್ಛತೆಗೆ ಮಹತ್ವ ನೀಡಬೇಕು. ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂಬುದು ಮಹಾತ್ಮ ಗಾಂಧಿ ಅವರ ಕನಸಾಗಿತ್ತು ಎಂದು ತಾ.ಪಂ.ಇಒ ಅಮರೇಶ ಹೇಳಿದರು.
ಸಂತೆಕೆಲ್ಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದುರ್ ಶಾಸ್ತ್ರಿ ಜಯಂತಿ ನಿಮಿತ್ಯ ಆಯೋಜಿಸಿದ್ದ ಸ್ವಚ್ಛತಾ ಹೀ ಸೇವಾ ಅಭಿಯಾನದಲ್ಲಿ ಮಾತನಾಡಿದರು. ಗ್ರಂಥಾಲಯ, ನರೇಗಾದಡಿ ನಿರ್ಮಿಸಿದ ಸಿಸಿ ರಸ್ತೆ, ಹಳ್ಳಕ್ಕೆ ನಿರ್ಮಿಸಿದ ಚೆಕ್ ಡ್ಯಾಮ್ ಪರಿಶೀಲಿಸಿದರು.