ಮಾಯಮುಡಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ

ಗೋಣಿಕೊಪ್ಪ: ಮಾನಿಲ್ ಅಯ್ಯಪ್ಪ ಸೇವಾ ಸಮಿತಿ, ಯುವಕ ಸಂಘ ಹಾಗೂ ಜೆಸಿಐ ಪೊನ್ನಂಪೇಟೆ ಗೋಲ್ಡನ್ ಸಹಯೋಗದಲ್ಲಿ ಮಾಯಮುಡಿ ಗ್ರಾಮದಲ್ಲಿ ಸೋಮವಾರ ಸ್ವಚ್ಛತಾ ಅಭಿಯಾನ ಮತ್ತು ರಕ್ಷಾ ಬಂಧನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಚೆನ್ನಂಗೊಲ್ಲಿಯಿಂದ ಮಾಯಮುಡಿಯ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿದ್ದ ಗಿಡಗಂಟಿ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊ ಡ ಲಾಯಿತು. ಗ್ರಾಮದ ಯುವಕರು ಪಾಲ್ಗೊಂಡು ಕಸ, ಪ್ಲಾಸ್ಟಿಕ್ ಹೆಕ್ಕಿದರು.

ಕಾಫಿ ಬೆಳೆಗಾರರಾದ ಕೊಡಂದೇರ ಎಂ.ತಿಮ್ಮಯ್ಯ, ಕಾಳಪಂಡ ಟಿಪ್ಪು ಬಿದ್ದಪ್ಪ, ತೀತರಮಾಡ ಪಿ.ಜಗದೀಶ್, ಜೆಸಿಐ ಪೊನ್ನಂಪೇಟೆ ಗೋಲ್ಡನ್ ಅಧ್ಯಕ್ಷೆ ಕೊಣಿಯಂಡ ಕಾವ್ಯ ಸಂಜು, ಮಾನಿಲ್ ಅಯ್ಯಪ್ಪ ಸೇವಾ ಸಮಿತಿ ಗೌರವಾಧ್ಯಕ್ಷ ಸಣ್ಣುವಂಡ ರಮೇಶ್, ಮಾನಿಲ್ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಚೆಪ್ಪುಡೀರ ಪ್ರದೀಪ್ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *