More

    ಮಾವಿನಕೆರೆ ಅತಿಕ್ರಮಣ ತೆರವುಗೊಳಿಸಿ

    ರಾಯಚೂರು: ನಗರದ ಐತಿಹಾಸಿಕ ಮಾವಿನಕೆರೆಗೆ ಸೇರಿದ ಜಾಗವನ್ನು ಅತಿಕ್ರಮಿಸಿ ವಾಣಿಜ್ಯ ಮಳಿಗೆ ನಿರ್ಮಿಸಿರುವವರ ವಿರುದ್ಧ ಹಾಗೂ ಅದಕ್ಕೆ ಸಹಕಾರ ನೀಡಿದ ಅಕಾರಿಗಳ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಒತ್ತಾಯಿಸಿದೆ.
    ಸಂಘಟನೆ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಶುಕ್ರವಾರ ಮನವಿ ಸಲ್ಲಿಸಿ, ರಾಜಾರೋಷವಾಗಿ ಕೆರೆ ಜಾಗವನ್ನು ಒತ್ತುವರಿ ಮಾಡಿ 10ಕ್ಕೂ ಹೆಚ್ಚು ವಾಣಿಜ್ಯ ಮಳಿಗೆ ನಿರ್ಮಾಣ ಮಾಡಿದ್ದು, ಕೂಡಲೇ ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
    ಈ ಹಿಂದೆ ಜಿಲ್ಲಾ ನ್ಯಾಯಾೀಶರು ಹಾಗೂ ಅಕಾರಿಗಳು ಭೇಟಿ ನೀಡಿ ಕೆರೆ ಜಾಗ ಒತ್ತುವರಿಯಾಗದಂತೆ ಹದ್ದುಬಸ್ತು ಮಾಡಬೇಕು ಎಂದು ತಿಳಿಸಿದ್ದರು. ಸಚಿವ ಎನ್.ಎಸ್.ಬೋಸರಾಜು ಕೆರೆ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದರು.
    ಜಿಲ್ಲಾಕಾರಿ ಮತ್ತು ನಗರಸಭೆ ಅಕಾರಿಗಳಿಗೆ ಮಾಹಿತಿ ಇದ್ದರೂ ಕೆರೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ ಕೆರೆಯ 14 ಎಕರೆ ಜಾಗ ಅತಿಕ್ರಮಣವಾಗಿದೆ ಎಂದು ಹೇಳಲಾಗುತ್ತಿದ್ದು, ಕೂಡಲೇ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಿ, ಸಂಬಂಸವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    ನಿಯೋಗದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಶಿವಕುಮಾರ ಯಾದವ, ಪದಾಕಾರಿಗಳಾದ ಕರುಣಾಕರ ರೆಡ್ಡಿ, ಜಾರ್ ಶರ್ೀ, ಮಹ್ಮದ್ ಶಫಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts