ಕೆರೆಗಳ ಒತ್ತುವರಿ ತೆರವು ಮಾಡಿ

kere

ಕಾರವಾರ: ಜಿಲ್ಲೆಯಲ್ಲಿರುವ ಸರ್ಕಾರಿ ಕೆರೆಗಳು ಯಾವುದೇ ಕಾರಣಕ್ಕೂ ಒತ್ತುವರಿಯಾಗದಂತೆ ತಡೆದು, ಅವುಗಳ ಸುತ್ತಲೂ ಸಂರಕ್ಷಣಾ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ  ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪೌರಾಡಳಿತ, ಸಣ್ಣ ನೀರಾವರಿ ಮತ್ತು ಅರಣ್ಯ ಇಲಾಖೆ ವ್ಯಾಪ್ತಿ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 2118 ಕೆರೆಗಳಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕರೆಗಳನ್ನು ಸರ್ವೇ ಮಾಡಿಸಿ, ಕೆರೆ ಇರುವ ಪ್ರದೇಶಕ್ಕೆ ಫೆನ್ಸಿಂಗ್ ಮಾಡಿಸಿ, ಆ ಪ್ರದೇಶ ಅತಿಕ್ರಮಣ ಹಾಗೂ ಒತ್ತುವರಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ಜಿಲ್ಲೆಯಲ್ಲಿರುವ ಕೆರೆಗಳು ಅತಿಕ್ರಮಣ ಅಥವಾ ಒತ್ತುವರಿಯಾಗಿದ್ದಲ್ಲಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಿ, ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಕೆರೆಗಳ ವ್ಯಾಪ್ತಿಯಲ್ಲಿ ಸಂರಕ್ಷಣಾ ಕಾಮಗಾರಿಗಳ ಅಗತ್ಯವಿದ್ದಲ್ಲಿ ನರೇಗಾಮೂಲಕ ಕಾಮಗಾರಿಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳಿಂದ ಹರಿಯುವ ತ್ಯಾಜ್ಯ ಮತ್ತು ಮಲಿನಗೊಂಡ ನೀರು, ಕೆರೆಗಳನ್ನು ಸೇರಿ ಕೆರೆಯ ನೀರು ಮಲಿನವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮಾಲಿನ್ಯ ನಿಯಂತ್ರಣಮಂಡಳಿಯ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸಿ ಸಂಬAಧಪಟ್ಟವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳನ್ನು ಸರ್ವೆ ಮಾಡಿ, ಸಂಬಂಧಪಟ್ಟ ಇಲಾಖೆಗಳಿಗೆ ಅದರ ವರದಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಕೆರೆಗಳ ಅಭಿವೃದ್ಧಿ ಕುರಿತಂತೆ ಕಾಮಗಾರಿಗಳನ್ನು ಕೈಗೊಳ್ಳಬೇಕಾದ ಅಗತ್ಯವಿದ್ದಲ್ಲಿ, ರಾಜ್ಯ ಕೆರೆ ಅಭಿವೃಧ್ದಿ ಪ್ರಾಧಿಕಾರಕ್ಕೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ದಿವ್ಯಶ್ರೀ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಜಿಲ್ಲಾ ಪರಿಸರ ಅಧಿಕಾರಿ ಸಂತೋಷ್ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು, ಪೌರಾಡಳಿತ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Share This Article

ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಭಾನುವಾರ ಹೀಗೆ ಮಾಡಿ ನೋಡಿ…devotional

devotional:ಭಾನುವಾರ ಸೂರ್ಯ ದೇವನನ್ನು ಪೂಜೆ ಮಾಡುವುದರಿಂದ ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ…

ಸುಡು ಬೇಸಿಗೆಯಲ್ಲಿ ಆರೋಗ್ಯ ನಿಮ್ಮ ಕೈಯಲ್ಲಿ! ಈ ಟಿಪ್ಸ್​ ತಪ್ಪದೇ ಫಾಲೋ ಮಾಡಿ, ಇಲ್ಲದಿದ್ರೆ ಆರೋಗ್ಯಕ್ಕೆ ಡೇಂಜರ್​ | Summer Tips

Summer Tips : ಎಲ್ಲೆಡೆ ಬೇಸಿಗೆ ಆರಂಭವಾಗಿದೆ. ಸೂರ್ಯನ ಪ್ರಖರವಾದ ಕಿರಣಗಳು ನಮ್ಮ ನೆತ್ತಿಯನ್ನು ಸುಡುತ್ತಿದೆ.…

ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…