More

    ಕೆರೆ ಒತ್ತುವರಿ ಖುಲ್ಲಾಗೊಳಿಸಿ

    ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಮಳಲಿ ಚನ್ನೇನಹಳ್ಳಿ ಮಲ್ಲಯ್ಯನಕೆರೆ ಪ್ರದೇಶವನ್ನು ಒತ್ತುವರಿ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

    ಶಿರಸ್ತೇದಾರ್ ಹೇಮಂತ್‌ಕುಮಾರ್ ಅವರಿಗೆ ಬುಧವಾರ ಮನವಿ ಸಲ್ಲಿಸಿದ ಮುಖಂಡರು, ಎಂ.ಸಿ.ಹಳ್ಳಿ ಗ್ರಾಪಂ ಅಧ್ಯಕ್ಷ ರಾಮೇಗೌಡ ಎಂಬುವವರು ಕೆರೆ ಒತ್ತುವರಿ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    ಡಿಎಸ್‌ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ಮಾತನಾಡಿ, ರಾಮೇಗೌಡ ಅವರು ಮಲ್ಲಯ್ಯನಕೆರೆಯ 20 ಎಕರೆ ಪ್ರದೇಶ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಸಂಬಂಧಿಸಿದ ಇಲಾಖೆಗೆ ದೂರು ನೀಡಿದರೂ ರಾಜಕೀಯ ಒತ್ತಡದಿಂದ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
    ರಾಮೇಗೌಡ ಎಂಬುವವರು ಸ್ಥಳೀಯ ದಲಿತ ರಾಮಚಂದ್ರ ಎಂಬುವವರ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ದುರುದ್ದೇಶದಿಂದ ಜೈಲುಶಿಕ್ಷೆ ಅನುಭವಿಸುವಂತೆ ಮಾಡಿದ್ದಾರೆ. ಅವರ ವಿರುದ್ಧ ಡಿಎಸ್‌ಎಸ್ ಮುಖಂಡರು ಪ್ರತಿಭಟನೆಗೆ ಮುಂದಾದರೆ ಗೂಂಡಾಗಳನ್ನು ಬಿಟ್ಟು ಅಡ್ಡಿಪಡಿಸುತ್ತಿದ್ದಾರೆ. ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವೃತ್ತ ನಿರೀಕ್ಷರ ಬೆಂಬಲವಿದೆ ಎಂದು ಆರೋಪಿಸಿದರು.
    ದಲಿತರ 25 ಎಕರೆಗೂ ಹೆಚ್ಚು ಭೂಮಿಯನ್ನು ಪಿಟಿಸಿಎಲ್ ಕಾಯ್ದೆ ಮೂಲಕ ದುರುಪಯೋಗ ಮಾಡಿಕೊಂಡು ಜಮೀನು ಖರೀದಿಸಿದ್ದಾರೆ. ಆ ನಿಟ್ಟಿನಲ್ಲಿ ರಾಮೇಗೌಡ ಅವರ ವಿರುದ್ಧದ ಎಲ್ಲ ದೂರುಗಳನ್ನು ಪರಿಗಣಿಸುವ ಮೂಲಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ನಿರಾಪರಾಧಿ ರಾಮಚಂದ್ರ ಅವರನ್ನು ಬಿಡುಗಡೆಗೊಳಿಸುವ ಜತೆಗೆ ಕೆರೆ ಒತ್ತುವರಿ ಖುಲ್ಲಾಗೊಳಿಸಬೇಕು ಎಂದು ಒತ್ತಾಯಿಸಿದರು.
    ಡಿಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಎಸ್.ಎನ್.ಮಹೇಂದ್ರಸ್ವಾಮಿ, ತಾಲೂಕು ಪ್ರಧಾನ ಸಂಚಾಲಕ ಮಂಜುನಾಥ್ ನಂಬಿಯಾರ್, ಸಂತೋಷ್ ಲಕ್ಯಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts