ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಸಾವು

ಹಾವೇರಿ: ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಮತ್ತು ಬಾಲಕಿ ನೀರುಪಾಲಾಗಿದ್ದಾರೆ.
ಗೀತಮ್ಮ ಕಣಜೇರ (40), ಉಷಾ (12) ಮೃತರು. ಗೀತಮ್ಮ ಕಣಜೇರ ಹಾಗೂ ಉಷಾ ಇಬ್ಬರೂ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಬಟ್ಟೆ ತೊಳೆಯಲು ಹೋಗಿದ್ದರು. ಮೊದಲು ಉಷಾ ಆಯತಪ್ಪಿ ನೀರಿಗೆ ಬಿದ್ದಿದ್ದಾಳೆ. ಅವಳನ್ನು ರಕ್ಷಿಸಲು ಹೋದ ಗೀತಮ್ಮ ಕೂಡ ನೀರುಪಾಲಾಗಿದ್ದರು. ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.

ಉಷಾ ಮೃತದೇಹದ ಶೋಧಕ್ಕಾಗಿ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಟ್ಟಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.