More

    ಕರಾವಳಿಯಲ್ಲಿ ಮೋಡ ಕವಿದ ವಾತಾವರಣ

    ಮಂಗಳೂರು: ಕರಾವಳಿಯಾಧ್ಯಂತ ಗುರುವಾರ ದಿನಪೂರ್ತಿ ಮೋಡಕವಿದ ವಾತಾವರಣ ಸಹಿತ ಮಿಶ್ರಿತ ವಾತಾವರಣ ಕಂಡುಬಂದಿದೆ. ಬೆಳಗ್ಗೆ ಕೆಲವು ಹೊತ್ತು ಮೋದ ಕವಿದಿದ್ದರೂ ನಂತರ ಪ್ರಖರ ಬಿಸಿಲಿನೊಂದಿಗೆ ಒಣಹವೆ ಇತ್ತು. ಸಂಜೆ ಗ್ರಾಮೀಣ ಭಾಗದಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿತ್ತು. ಕಳೆದ 2 ತಿಂಗಳಲ್ಲಿ ಇದೇ ಮೊದಲಬಾರಿಗೆ ಗರಿಷ್ಟ ತಾಪಮಾನ 30ರ ಆಸುಪಾಸು ತಲುಪಿದೆ.

    ದ.ಕ ಜಿಲ್ಲೆಯಲ್ಲಿ ಗುರುವಾರ ಸರಾಸರಿ 30.1 ಡಿಗ್ರಿ ಗರಿಷ್ಟ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ಸಂಜೆ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಠಾಂಶ ದಾಖಲಾಗಿರುವುದರಿಂದ ರಾತ್ರಿ ಪೂರಾ ಒಣ ಚಳಿ ಮುಂದುವರಿದಿತ್ತು. ದ.ಕ, ಉಡುಪಿ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಸರಾಸರಿ 33.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾತ್ರಿ ಮಳೆ ಕಾಡು ಹಾಗು ಪಶ್ಚಿಮಘಟ್ಟದ ಹಲವಡೆ ಹೆಚ್ಚಿನ ಪ್ರಮಾಣದ ಮೋಡಕವಿದ ವಾತಾವರಣ ಕಂಡುಬಂದಿದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಕಂಡುಬಂದಿದ್ದು, ಮುಂದಿನ 1-2 ದಿನ ರಾತ್ರಿ ವೇಳೆ ಚಳಿಯ ತೀವ್ರತೆ ಸಾಧಾರಣಕ್ಕಿಂತ ತುಸು ಹೆಚ್ಚಾಗಲಿದೆ. ಹಗಲು ಮೋಡ ಕವಿದ ವಾತಾವರಣ ಸಹಿತ ಒಣ ಹವೆ, ಸಂಜೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಹವಾಮಾನ ಮನ್ಸೂಚನಾ ಕೇಂದ್ರ ಮಾಹಿತಿ ನೀಡಿದೆ.

    ಮೇ ತಿಂಗಳಲ್ಲಿ ಪೂರ್ವ ಮುಂಗಾರು ಚುರುಕಾಗಬೇಕಿತ್ತು. ವಾಯುಭಾರ ಕುಸಿತ, ಚಂಡಮಾರುತದ ಲಕ್ಷಣಗಳು ಕೂಡ ಕಾಣಿಸಿಕೊಳ್ಳದೇ ಇರುವುದರಿಂದ ಪೂರ್ವ ಮುಂಗಾರು ಬಹಳಷ್ಟು ಕ್ಷೀಣಿಸಿ ಮುಂದೆ ಬರುವ ಮುಂಗಾರು ಮಳೆ ಕೂಡ ಜೂನ್ ಬದಲು ಜುಲೈ, ಆಗಸ್ಟ್‌ನಲ್ಲಿ ತನ್ನ ಲಯ ಕಂಡು ಕೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿಯ ವಿಜ್ಞಾನಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts