More

    ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ: ಸಿಎಂ ಆಯ್ಕೆ ಕುರಿತು ಆಯ್ತು ಈ ನಿರ್ಧಾರ

    ಬೆಂಗಳೂರು: ಸಂಪೂರ್ಣ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್​ನಲ್ಲಿ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರ ತಲೆನೋವಾಗಿ ಪರಿಣಮಿಸಿದ್ದು, ಕೊನೆಗೂ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಂದು ನಿರ್ಣಯಕ್ಕೆ ಬರಲಾಗಿದೆ.

    ಶಾಸಕಾಂಗ ಪಕ್ಷದ ಸಭೆಯ ಜತೆಗೆ ಸಿಎಂ ಆಯ್ಕೆ ಕುರಿತಂತೆ ಪ್ರತ್ಯೇಕವಾಗಿ ಸಂಧಾನ ಮಾತುಕತೆ ಕೂಡ ನಡೆಸಲಾಯಿತು. ಎಐಸಿಸಿ ವೀಕ್ಷಕರು ಮತ್ತು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಮ್ಮುಖದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಿತು.

    ಇದನ್ನೂ ಓದಿ: ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!

    ರಾಜ್ಯದಲ್ಲಿನ ಗೆಲುವಿಗೆ ಸಂಬಂಧಿಸಿದಂತೆ ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿಗೆ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಅಲ್ಲದೆ ಭಾರತ್ ಜೋಡೋ ಯಾತ್ರೆಯ ಬಗ್ಗೆ ಪ್ರಸ್ತಾಪ ಮಾಡಲಾಯಿತು. ಭಾರತ್ ಜೋಡೋ ಯಾತ್ರೆಯಿಂದ ಹೆಚ್ಚಿನ ಸ್ಥಾನ ಗೆದ್ದಿರುವ ಬಗ್ಗೆ ಶಾಸಕಾಂಗ ಸಭೆಯಲ್ಲಿ ಉಲ್ಲೇಖಿಸಲಾಯಿತು. ರಾಜ್ಯದ ಎಲ್ಲ ಜನರ ಹಿತ ಕಾಯುವಂಥ, ಜನರ ಬದುಕು ಸುಧಾರಿಸುವಂಥ ನಿರ್ಣಯ ನೀತಿ ರೂಪಿಸುವ ನಿರ್ಧಾರ ಕೈಗೊಳ್ಳಲಾಯಿತು.

    ಇದನ್ನೂ ಓದಿ: ಜಗತ್ತು ನಿಮ್ಮನ್ನು ತಿರಸ್ಕರಿಸಿದರೂ..: ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಅಮ್ಮನ ಬಳಿಗೆ ತೆರಳಿ ಹೀಗಂದಿದ್ದೇಕೆ?

    ಆದರೆ ಸಿಎಂ ಆಯ್ಕೆ ವಿಚಾರ ಮಾತ್ರ ಕಗ್ಗಂಟಾಗಿಯೇ ಉಳಿಯಿತು. ಶಾಸಕಾಂಗ ಪಕ್ಷದ ಸಭೆ ಜತೆಗೆ ಪ್ರತ್ಯೇಕ ಸಂಧಾನ ಮಾತುಕತೆ ನಡೆದರೂ ಆಯ್ಕೆ ವಿಚಾರ ಇತ್ಯರ್ಥವಾಗಲಿಲ್ಲ. ಇಷ್ಟು ದಿನ ಒಗ್ಗಟ್ಟಿನಿಂದ ಕೆಲಸ ಮಾಡಿದ್ದೇವೆ, ಈಗ ಅಧಿಕಾರಕ್ಕಾಗಿ ಗೊಂದಲ ಮಾಡಿಕೊಳ್ಳುವುದು ಬೇಡ, ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹ ಮಾಡೋಣ, ಉಳಿದಿದ್ದು ಹೈಕಮಾಂಡ್ ಗೆ ಬಿಡೋಣ ಎಂಬ ನಿಲುವಿಗೆ ಬರಲಾಯಿತು.

    ಇದನ್ನೂ ಓದಿ: ದೃಷ್ಟಿ ಇಲ್ಲದಿದ್ರೂ ಶಾಲೆಗೇ ಸಿಬಿಎಸ್​ಇ ಟಾಪರ್​: ಆ್ಯಸಿಡ್​ ದಾಳಿಗೆ ಎರಡೂ ಕಣ್ಣು ಕಳೆದುಕೊಂಡ್ರೂ ಹೋಪ್ ಕಳ್ಕೊಂಡಿಲ್ಲ!

    ಅಂತಿಮವಾಗಿ ಸಿಎಂ ಯಾರಾಗಬೇಕು ಎಂಬ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ನಿರ್ಧಾರಕ್ಕೆ ಬಿಡುವ ನಿರ್ಣಯಕ್ಕೆ ಬರಲಾಯಿತು. ಹೀಗಾಗಿ ಸಿಎಂ ಆಯ್ಕೆ ವಿಚಾರ ದೆಹಲಿಗೆ ತಲುಪಿದಂತಾಗಿದೆ. ಶಾಸಕಾಂಗ ಪಕ್ಷದ ಅಭಿಪ್ರಾಯದ ಮೇರೆಗೆ ನಾಳೆ ಸಿಎಂ ಆಯ್ಕೆ ದೆಹಲಿಯಲ್ಲಿ ಅಂತಿಮಗೊಳ್ಳಲಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ನಾಳೆಯೇ ದೆಹಲಿಗೆ ಕರೆಸಿಕೊಂಡು ಸಿಎಂ ಯಾರೆಂಬುದು ಘೋಷಣೆ ಆಗುವ ಸಾಧ್ಯತೆ ಇದೆ. ಬಹುತೇಕ 50:50 ಸೂತ್ರದಂತೆ ನಡೆಯಲಿದ್ದು, ಸಿಎಂ-ಡಿಸಿಎಂ ಘೋಷಣೆ ಆಗಲಿದೆ ಎಂದು ಮೂಲಗಳು ತಿಳಿಸಿವೆ.

    ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಒಕ್ಕಲಿಗ ಸ್ವಾಮೀಜಿಗಳ ಒಕ್ಕೊರಲ ಒತ್ತಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts