ರಸ್ತೆಯಲ್ಲಿ ತ್ಯಾಜ್ಯ ಚೆಲ್ಲಿದ್ದಕ್ಕೆ CM ಗರಂ: ಅಧಿಕಾರಿಗಳಿಗೆ ರೋಡಲ್ಲಿಯೇ ಕ್ಲಾಸ್ ತೆಗೆದುಕೊಂಡ ಸಿದ್ದರಾಮಯ್ಯ!​

Untitled design - 2025-09-27T161418.874
Published on

ಮಾರ್ಗ ಮಧ್ಯದಲ್ಲಿ‌ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ CM ಸಿದ್ದರಾಮಯ್ಯ, ಕಾರು ನಿಲ್ಲಿಸಿ ಕಾರಿನಿಂದ ಇಳಿದ ಸಿಎಂ ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಸೀಜ್ ಮಾಡಿ ಕೇಸು ದಾಖಲಿಸುವಂತೆ ಸೂಚಿಸಿದರು.

ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು.

ವೈಟ್ ಟಾಪಿಂಗ್ ರಸ್ತೆ ಹಾಳು: ದುರಸ್ತಿಗೆ ಸಿಎಂ ಸೂಚನೆ

ಮೆಟ್ರೋ ಕಾಮಗಾರಿ ಆಗುವಾಗ ಮೆಟ್ರೋದವರು ಸರ್ವೀಸ್ ರಸ್ತೆಗಳ ನಿರ್ಲಕ್ಷ್ಯ ಮಾಡಿರುವುದು, ರಸ್ತೆ ಬದಿ ನೀರು ನಿಲ್ಲುವಂತೆ ಮಾಡಿರುವುದು, ನೀರು ಸರಾಗವಾಗಿ ಹರಿಯಲು ಇರುವ ವ್ಯವಸ್ಥೆಯನ್ನೂ ಮುಚ್ಚಿಸಿರುವ ಬಗ್ಗೆ ಹಾಗೂ ವೈಟ್ ಟಾಪಿಂಗ್ ರಸ್ತೆ ಹಾಳು ಮಾಡಿರುವ ಬಗ್ಗೆ ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಎಲ್ಲವನ್ನೂ ಗಮನಿಸಿದ ಸಿಎಂ ತಕ್ಷಣ ದುರಸ್ತಿಗೆ ಹಾಗೂ ಸರ್ವೀಸ್ ರಸ್ತೆಗಳ ನಿರ್ವಹಣೆಗೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net