More

    ಲಾರಿಯೊಳಕ್ಕೇ ಸಿಲುಕಿತು ಅರ್ಧ ಕಾರು, 6 ಮಂದಿ ಸ್ಥಳದಲ್ಲೇ ಸಾವು: ಭೀಕರತೆಗೆ ಎದೆ ನಲುಗಿತು ಎಂದ ಸಿಎಂ, ಪರಿಹಾರ ಘೋಷಣೆ

    ಕೊಪ್ಪಳ: ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ್ದಾರೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಅಪ್ಪಳಿಸಿದ ಕಾರಿನ ಅರ್ಧ ಭಾಗ ಲಾರಿಯೊಳಕ್ಕೇ ಸಿಲುಕಿಕೊಂಡಿದ್ದು, ಶವಗಳನ್ನು ಹೊರತೆಗೆಯುವುದೇ ಹರಸಾಹಸವಾಗಿ ಪರಿಣಮಿಸಿತ್ತು.

    ಇದನ್ನೂ ಓದಿ: ಹೊಡೆಯುವುದಾದ್ರೆ ಹೊಡೆಯಿರಿ, ಕಡ್ಡಾಯವಾಗಿ ಬಿಲ್ ಕಟ್ಟಿಸಿಕೊಳ್ಳಿ ಅಂದಿದ್ದಾರೆ; ‘ಗ್ಯಾರಂಟಿ’ ತಂದಿಟ್ಟ ಫಜೀತಿ

    ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಲಾರಿ ಹಾಗೂ ಕಾರು ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮಿಕಾ ಸ್ಥಳದಲ್ಲೇ ಸಾವಿಗೀಡಾದವರು. ಇವರು ಇಂಡಿಕಾ ಕಾರಿನಲ್ಲಿ ವಿಜಯಪುರದಿಂದ ಬೆಂಗಳೂರಿನತ್ತ ಹೊರಟಿದ್ದರು. ಮಾರ್ಗಮಧ್ಯೆ ಕಾರಿನ ಟಯರ್ ಸ್ಫೋಟಗೊಂಡು ರಸ್ತೆಯ ಇನ್ನೊಂದು ಬದಿಗೆ ಬಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.

    ಇದನ್ನೂ ಓದಿ: ಒಂಟಿಯಾಗಿದ್ದ, 3 ಮಕ್ಕಳ ವೃದ್ಧತಾಯಿ ಕೋಣೆಯಲ್ಲಿ ಶವವಾಗಿ ಪತ್ತೆ!; ಪ್ರಕರಣ ಸಂಬಂಧ 5 ತಂಡಗಳ ರಚನೆ

    ‘ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಅತಿಯಾದ ವೇಗ, ಅಜಾಗರೂಕತೆಗಳೇ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಲಾರಿಯೊಳಕ್ಕೇ ಸಿಲುಕಿತು ಅರ್ಧ ಕಾರು, 6 ಮಂದಿ ಸ್ಥಳದಲ್ಲೇ ಸಾವು: ಭೀಕರತೆಗೆ ಎದೆ ನಲುಗಿತು ಎಂದ ಸಿಎಂ, ಪರಿಹಾರ ಘೋಷಣೆ

    VIDEO | ಸಿನಿಮೀಯ ಅಪಘಾತ: ವಿಡಿಯೋ ಮಾಡುತ್ತಿದ್ದಾಗಲೇ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts