More

    ರಾಜ್ಯದಲ್ಲಿ ಹೆಚ್ಚಾದ ಕರೊನಾ ಆತಂಕ; ಸಿಎಂ ಸಭೆಯಲ್ಲಿ ಹೊರಬಿತ್ತು ಹೊಸ ಗೈಡ್​​ಲೈನ್ಸ್​: ಇಲ್ಲಿದೆ ವಿವರ…

    ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಹೆಚ್ಚಳದ ಜತೆಗೆ ಕರೊನಾ ರೂಪಾಂತರಿ ಒಮಿಕ್ರೋನ್​ ಭೀತಿಯೂ ಉಂಟಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್​-19 ನಿಯಂತ್ರಣ ಸಂಬಂಧ ವಿಶೇಷ ಸಭೆ ನಡೆಸಲಾಗಿದೆ. ಕರೊನಾ ಪ್ರಕರಣಗಳ ನಿಯಂತ್ರಣ ಹಾಗೂ ಸೋಂಕು ತಡೆ ಸಲುವಾಗಿ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಪ್ರಮುಖ ನಿರ್ಧಾರಗಳ ವಿವರ ಇಂತಿದೆ.

    • ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವುದು.
    • ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು.
    • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್​ಟಿಪಿಸಿಆರ್​ ನೆಗೆಟಿವ್ ರಿಪೋರ್ಟ್ ಕಡ್ಡಾಯ.
    • ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್​​ಗಳಲ್ಲಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.
    • ಹದಿನಾರು ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್​ಟಿಪಿಸಿಆರ್​ ಪರೀಕ್ಷೆ ಮಾಡಿಸಬೇಕು.
    • ಹಾಸ್ಟೆಲ್​ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ ಏಳನೇ ದಿನಕ್ಕೆ ಮತ್ತೊಮ್ಮೆ ಆರ್​ಟಿಪಿಸಿಆರ್​ ಪರೀಕ್ಷೆ ಕಡ್ಡಾಯ.
    • ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
    • ಹೋಟೆಲ್​, ರೆಸ್ಟೋರೆಂಟ್‌, ಸಿನಿಮಾ ಮಂದಿರ, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಲಸಿಕೆಯ ಎರಡೂ ಡೋಸ್ ಪಡೆದಿರಬೇಕು.
    • ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.
    • ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
    • ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.
    • ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.
    ರಾಜ್ಯದಲ್ಲಿ ಹೆಚ್ಚಾದ ಕರೊನಾ ಆತಂಕ; ಸಿಎಂ ಸಭೆಯಲ್ಲಿ ಹೊರಬಿತ್ತು ಹೊಸ ಗೈಡ್​​ಲೈನ್ಸ್​: ಇಲ್ಲಿದೆ ವಿವರ...

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts