ಚಿಕ್ಕಬಳ್ಳಾಪುರ ಅಪಘಾತ; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಘೋಷಿಸಿದ ಸಿಎಂ

CM relief Fund
Published on

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯ ಚಿತ್ರಾವತಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಸಿಎಂ ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

CM tweet

ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಾಮಾಜಿಕ ಜಾಲತಾಣ ಎಕ್ಸ್​ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಮಾತನಾಡಿದ ಪ್ರದೀಪ್​ ಈಶ್ವರ್​ ಅಪಘಾತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ತಿಳಿಸಲಾಗಿದ್ದು, ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಮೃತರ ಪೈಕಿ ಬಹುತೇಕರು ಆಂಧ್ರಪ್ರದೇಶದವರಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳು ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಶಾಸಕ ಪ್ರದೀಪ್​ ಈಶ್ವರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net