More

    15 ತಿಂಗಳ ಮಗು ಸಲುವಾಗಿ ಪ್ರಧಾನಿಗೆ ಮನವಿ ಮಾಡಿಕೊಂಡ ಸಿಎಂ!

    ಬೆಂಗಳೂರು: ರಾಜ್ಯದ ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರಲ್ಲಿ ಕೆಲವೊಮ್ಮೆ ಮನವಿ ಮಾಡಿಕೊಳ್ಳುವುದಿರುತ್ತದೆ. ಆದರೆ ಈ ಸಲ ಒಂದು ವಿಶೇಷ ಕಾರಣಕ್ಕಾಗಿ ಪ್ರಧಾನಿ ಮೋದಿಯವರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

    ರಾಜ್ಯದಲ್ಲಿನ 15 ತಿಂಗಳ ಮಗುವೊಂದರ ಚಿಕಿತ್ಸೆಗಾಗಿ ಔಷಧಕ್ಕೆ ಸಂಬಂಧಿಸಿದಂತೆ ಆಮದು ಸುಂಕ ವಿನಾಯಿತಿ ನೀಡುವಂತೆ ಸಿದ್ದರಾಮಯ್ಯ ಅವರು ಪ್ರಧಾನಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.

    ಇದನ್ನೂ ಓದಿ: ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?

    ‘ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆ ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂಬುದಾಗಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.

    ನಟ ದರ್ಶನ್ ವಿರುದ್ಧ ದೂರು ಕೊಟ್ಟ ಮಹಿಳೆ​: ಹರಿದುಹೋದ ಬಟ್ಟೆ, ಹೊಟ್ಟೆಗೆ ಗಾಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts